ಕೀರ್ತನೆಗಳು 71 : 1 (IRVKN)
ವೃದ್ಧಾಪ್ಯದ ಪ್ರಾರ್ಥನೆ ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.
ಕೀರ್ತನೆಗಳು 71 : 2 (IRVKN)
ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.
ಕೀರ್ತನೆಗಳು 71 : 3 (IRVKN)
ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
ಕೀರ್ತನೆಗಳು 71 : 4 (IRVKN)
ದೇವರೇ, ನನ್ನನ್ನು ದುಷ್ಟನ ಕೈಯಿಂದಲೂ, ಅನ್ಯಾಯ ಮತ್ತು ಹಿಂಸಕನ ವಶದಿಂದಲೂ ತಪ್ಪಿಸು.
ಕೀರ್ತನೆಗಳು 71 : 5 (IRVKN)
ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ?
ಕೀರ್ತನೆಗಳು 71 : 6 (IRVKN)
ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
ಕೀರ್ತನೆಗಳು 71 : 7 (IRVKN)
ನನ್ನ ದುಸ್ಥಿತಿಯು ಅನೇಕರಿಗೆ ಒಂದು ಗುರುತಾಗಿದೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.
ಕೀರ್ತನೆಗಳು 71 : 8 (IRVKN)
ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.
ಕೀರ್ತನೆಗಳು 71 : 9 (IRVKN)
ವೃದ್ಧಾಪ್ಯದಲ್ಲಿ ನನ್ನನ್ನು ಧಿಕ್ಕರಿಸಬೇಡ; ನನ್ನ ಬಲವು ಕುಂದಿದಾಗ ಕೈಬಿಡಬೇಡ.
ಕೀರ್ತನೆಗಳು 71 : 10 (IRVKN)
ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,
ಕೀರ್ತನೆಗಳು 71 : 11 (IRVKN)
“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
ಕೀರ್ತನೆಗಳು 71 : 12 (IRVKN)
ದೇವರೇ, ದೂರವಾಗಿರಬೇಡ. ನನ್ನ ದೇವರೇ, ಬೇಗ ಸಹಾಯಮಾಡು.
ಕೀರ್ತನೆಗಳು 71 : 13 (IRVKN)
ನನ್ನ ಪ್ರಾಣಕ್ಕೆ ಹೊಂಚು ಹಾಕುವವರು ಅಪಮಾನ ಹೊಂದಿ ನಾಶವಾಗಲಿ; ನನಗೆ ಕೇಡುಬಗೆಯುವವರನ್ನು ನಿಂದೆ, ಅಪಮಾನಗಳು ಕವಿಯಲಿ.
ಕೀರ್ತನೆಗಳು 71 : 14 (IRVKN)
ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.
ಕೀರ್ತನೆಗಳು 71 : 15 (IRVKN)
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
ಕೀರ್ತನೆಗಳು 71 : 16 (IRVKN)
ಕರ್ತನಾದ ಯೆಹೋವನೇ, ನಾನು ನಿನ್ನ ಮಹತ್ತರವಾದ ಕೃತ್ಯಗಳನ್ನು ಸ್ಮರಿಸುವವನಾಗಿ ನಿನ್ನೊಬ್ಬನ ನೀತಿಯನ್ನೇ ಪ್ರಕಟಪಡಿಸುವೆನು.
ಕೀರ್ತನೆಗಳು 71 : 17 (IRVKN)
ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.
ಕೀರ್ತನೆಗಳು 71 : 18 (IRVKN)
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.
ಕೀರ್ತನೆಗಳು 71 : 19 (IRVKN)
ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?
ಕೀರ್ತನೆಗಳು 71 : 20 (IRVKN)
ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
ಕೀರ್ತನೆಗಳು 71 : 21 (IRVKN)
ನನ್ನ ಗೌರವವನ್ನು ಹೆಚ್ಚಿಸು; ನನಗೆ ಅಭಿಮುಖನಾಗಿ ಸಂತೈಸು.
ಕೀರ್ತನೆಗಳು 71 : 22 (IRVKN)
ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
ಕೀರ್ತನೆಗಳು 71 : 23 (IRVKN)
ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ ನಿನ್ನನ್ನು ಹಾಡಿಹರಸುವವು.
ಕೀರ್ತನೆಗಳು 71 : 24 (IRVKN)
ನನ್ನ ಕೇಡಿಗೆ ಪ್ರಯತ್ನಿಸಿದವರು ಆಶಾಭಂಗಪಟ್ಟು ಅಪಮಾನ ಹೊಂದಿದ್ದಾರೆ. ಆದುದರಿಂದ ನನ್ನ ನಾಲಿಗೆಯು ದಿನವೆಲ್ಲಾ ನಿನ್ನ ನೀತಿಸಾಧನೆಯನ್ನು ವರ್ಣಿಸುತ್ತಿರುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24