ಕೀರ್ತನೆಗಳು 72 : 1 (IRVKN)
ರಾಜಾಶೀರ್ವಾದ *ಸೊಲೊಮೋನನ ಕೀರ್ತನೆ.
ಕೀರ್ತ 21; 45 *
ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.
ಕೀರ್ತನೆಗಳು 72 : 2 (IRVKN)
ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.
ಕೀರ್ತನೆಗಳು 72 : 3 (IRVKN)
ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.
ಕೀರ್ತನೆಗಳು 72 : 4 (IRVKN)
ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.
ಕೀರ್ತನೆಗಳು 72 : 5 (IRVKN)
ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, * ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ತಲತಲಾಂತರಗಳವರೆಗೂ ಅವನು ಜೀವಿಸುವನು.
ಕೀರ್ತನೆಗಳು 72 : 6 (IRVKN)
ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.
ಕೀರ್ತನೆಗಳು 72 : 7 (IRVKN)
ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.
ಕೀರ್ತನೆಗಳು 72 : 8 (IRVKN)
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಕೀರ್ತನೆಗಳು 72 : 9 (IRVKN)
ಅರಣ್ಯವಾಸಿಗಳು ಅರಣ್ಯವಾಸಿಗಳು ಅಥವಾ ಅವನ ಶತ್ರುಗಳು. ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.
ಕೀರ್ತನೆಗಳು 72 : 10 (IRVKN)
ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.
ಕೀರ್ತನೆಗಳು 72 : 11 (IRVKN)
ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.
ಕೀರ್ತನೆಗಳು 72 : 12 (IRVKN)
ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
ಕೀರ್ತನೆಗಳು 72 : 13 (IRVKN)
ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.
ಕೀರ್ತನೆಗಳು 72 : 14 (IRVKN)
ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು§ ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.
ಕೀರ್ತನೆಗಳು 72 : 15 (IRVKN)
ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.
ಕೀರ್ತನೆಗಳು 72 : 16 (IRVKN)
ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
ಕೀರ್ತನೆಗಳು 72 : 17 (IRVKN)
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಕೀರ್ತನೆಗಳು 72 : 18 (IRVKN)
ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.
ಕೀರ್ತನೆಗಳು 72 : 19 (IRVKN)
ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
ಕೀರ್ತನೆಗಳು 72 : 20 (IRVKN)
ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.

1 2 3 4 5 6 7 8 9 10 11 12 13 14 15 16 17 18 19 20