ಕೀರ್ತನೆಗಳು 74 : 1 (IRVKN)
ದೇವಾಲಯವನ್ನು ಹಾಳುಮಾಡಿದ ಶತ್ರುಗಳನ್ನು ತಗ್ಗಿಸಬೇಕೆಂಬ ಪ್ರಾರ್ಥನೆ *ಆಸಾಫನ ಪದ್ಯ.
ಕೀರ್ತ 79 *ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
ಕೀರ್ತನೆಗಳು 74 : 2 (IRVKN)
ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
ಕೀರ್ತನೆಗಳು 74 : 3 (IRVKN)
ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
ಕೀರ್ತನೆಗಳು 74 : 4 (IRVKN)
ನಿನ್ನ ದರ್ಶನಾಲಯದ ಮಧ್ಯದಲ್ಲಿ ನಿನ್ನ ವಿರೋಧಿಗಳು ಆರ್ಭಟಿಸುತ್ತಾರೆ; ನಮ್ಮ ಆರಾಧನಾ ಚಿಹ್ನೆಗಳನ್ನು ತೆಗೆದು ತಮ್ಮ ಚಿಹ್ನೆಗಳನ್ನು ಇಟ್ಟಿದ್ದಾರೆ.
ಕೀರ್ತನೆಗಳು 74 : 5 (IRVKN)
ಮರಗಳ ಗುಂಪಿನಲ್ಲಿ ಕೊಡಲಿಗಳನ್ನು ಮೇಲೆತ್ತುವ ಜನರೋ ಎಂಬಂತಿದ್ದಾರೆ.
ಕೀರ್ತನೆಗಳು 74 : 6 (IRVKN)
ನೋಡು, ಅವರು ಈಗ ಕೈಕೊಡಲಿ ಮತ್ತು ಸುತ್ತಿಗೆಗಳಿಂದ, ದೇವಾಲಯದ ಕೆತ್ತನೆಯ ಕೆಲಸವನ್ನೆಲ್ಲಾ ಹೊಡೆದುಹಾಕುತ್ತಿದ್ದಾರೆ.
ಕೀರ್ತನೆಗಳು 74 : 7 (IRVKN)
ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.
ಕೀರ್ತನೆಗಳು 74 : 8 (IRVKN)
“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.
ಕೀರ್ತನೆಗಳು 74 : 9 (IRVKN)
ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.
ಕೀರ್ತನೆಗಳು 74 : 10 (IRVKN)
ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?
ಕೀರ್ತನೆಗಳು 74 : 11 (IRVKN)
ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.
ಕೀರ್ತನೆಗಳು 74 : 12 (IRVKN)
ದೇವರೇ, ನೀನು ಮೊದಲಿನಿಂದಲೂ ನನ್ನ ಅರಸನೂ, ಲೋಕಮಧ್ಯದಲ್ಲಿ ರಕ್ಷಣೆಗಳನ್ನು ನಡೆಸಿದಾತನೂ ಆಗಿದ್ದೀಯಲ್ಲವೇ?
ಕೀರ್ತನೆಗಳು 74 : 13 (IRVKN)
ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.
ಕೀರ್ತನೆಗಳು 74 : 14 (IRVKN)
ಲಿವ್ಯಾತಾನನ* ಲಿವ್ಯಾತಾನನ ಲಿವ್ಯಾತಾನ್ (104:26; ಯೆಶಾ 27:1) ಎಂಬುದು ಪೌರಾಣಿಕ ಘಟಸರ್ಪದ ಹೆಸರಾಗಿದೆ, ಇತರ ಸ್ಥಳಗಳಲ್ಲಿ ಬೇರೆ ಹೆಸರಿನಿಂದ ಕರೆಯಲ್ಪಟ್ಟಿದೆ. ಇದು ಅನೇಕ ತಲೆಗಳನ್ನು ಹೊಂದಿದೆಯೆಂದು ಭಾವಿಸಲಾಗಿದೆ. ಕೆಲವೊಮ್ಮೆ ನೀರಿನಲ್ಲಿರುವ ಘಟಸರ್ಪಗಳನ್ನು “ಕಡಲ ಮಹಾ ಹಾವುಗಳು” ಅಥವಾ “ಸಮುದ್ರದಲ್ಲಿ ವಾಸಿಸುವ ಮಹಾ ಪ್ರಾಣಿಗಳು” ಎಂದು ಅನುವಾದಿಸಲಾಗಿದೆ. ಶಿರಚ್ಛೇದನೆಮಾಡಿ, ಅಡವಿಯ ಮೃಗಸಮುದಾಯಕ್ಕೆ † ಮೃಗಸಮುದಾಯಕ್ಕೆ ಅಥವಾ ಜನರಿಗೆ. ಆಹಾರ ಕೊಟ್ಟವನು ನೀನು.
ಕೀರ್ತನೆಗಳು 74 : 15 (IRVKN)
ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
ಕೀರ್ತನೆಗಳು 74 : 16 (IRVKN)
ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
ಕೀರ್ತನೆಗಳು 74 : 17 (IRVKN)
ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.
ಕೀರ್ತನೆಗಳು 74 : 18 (IRVKN)
ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.
ಕೀರ್ತನೆಗಳು 74 : 19 (IRVKN)
ನಿನ್ನ ಬೆಳವಕ್ಕಿಯ ಜೀವವನ್ನು ಕಾಡುಮೃಗಕ್ಕೆ ಕೊಡಬೇಡ; ನಿನ್ನ ದೀನಮಂಡಲಿಯನ್ನು ಸದಾ ಮರೆಯಬೇಡ.
ಕೀರ್ತನೆಗಳು 74 : 20 (IRVKN)
ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
ಕೀರ್ತನೆಗಳು 74 : 21 (IRVKN)
ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.
ಕೀರ್ತನೆಗಳು 74 : 22 (IRVKN)
ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.
ಕೀರ್ತನೆಗಳು 74 : 23 (IRVKN)
ಮೇಲಣ ಲೋಕವನ್ನು ಎಡೆಬಿಡದೆ ಮುಟ್ಟುತ್ತಿರುವ, ನಿನ್ನ ವೈರಿಗಳ ಗದ್ದಲವನ್ನೂ ನಿನ್ನ ವಿರೋಧಿಗಳ ದೊಂಬಿಯನ್ನೂ ಮರೆಯದಿರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23