ಕೀರ್ತನೆಗಳು 75 : 1 (IRVKN)
ನ್ಯಾಯಾಧೀಶನಾದ ದೇವರಿಗೆ ಸ್ತುತಿ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.
ಕೀರ್ತ 57 *
ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
ಕೀರ್ತನೆಗಳು 75 : 2 (IRVKN)
ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
ಕೀರ್ತನೆಗಳು 75 : 3 (IRVKN)
ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. QSS ಸೆಲಾ SE
ಕೀರ್ತನೆಗಳು 75 : 4 (IRVKN)
ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
ಕೀರ್ತನೆಗಳು 75 : 5 (IRVKN)
ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
ಕೀರ್ತನೆಗಳು 75 : 6 (IRVKN)
ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
ಕೀರ್ತನೆಗಳು 75 : 7 (IRVKN)
ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
ಕೀರ್ತನೆಗಳು 75 : 8 (IRVKN)
ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
ಕೀರ್ತನೆಗಳು 75 : 9 (IRVKN)
ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
ಕೀರ್ತನೆಗಳು 75 : 10 (IRVKN)
ದುಷ್ಟರ ಕೊಂಬುಗಳನ್ನೆಲ್ಲಾ* ಕೊಂಬುಗಳನ್ನೆಲ್ಲಾ ಅಥವಾ ಬಲವನ್ನು. ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಕೊಂಬುಗಳನ್ನು ಅಥವಾ ಬಲವನ್ನು. ಉನ್ನತಮಟ್ಟಕ್ಕೆ ಎತ್ತಲ್ಪಡುವವು.

1 2 3 4 5 6 7 8 9 10