ಕೀರ್ತನೆಗಳು 76 : 1 (IRVKN)
ಮಹಾಭಯಂಕರನಾದ ದೇವರಿಗೆ ಸ್ತುತಿ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು.
ಕೀರ್ತ 75 *
ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.
ಕೀರ್ತನೆಗಳು 76 : 2 (IRVKN)
ಸಾಲೇಮಿನಲ್ಲಿ* ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
ಕೀರ್ತನೆಗಳು 76 : 3 (IRVKN)
ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. QSS ಸೆಲಾ SE
ಕೀರ್ತನೆಗಳು 76 : 4 (IRVKN)
ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.
ಕೀರ್ತನೆಗಳು 76 : 5 (IRVKN)
ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.
ಕೀರ್ತನೆಗಳು 76 : 6 (IRVKN)
ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.
ಕೀರ್ತನೆಗಳು 76 : 7 (IRVKN)
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
ಕೀರ್ತನೆಗಳು 76 : 8 (IRVKN)
ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,
ಕೀರ್ತನೆಗಳು 76 : 9 (IRVKN)
ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. QSS ಸೆಲಾ SE
ಕೀರ್ತನೆಗಳು 76 : 10 (IRVKN)
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. .
ಕೀರ್ತನೆಗಳು 76 : 11 (IRVKN)
ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
ಕೀರ್ತನೆಗಳು 76 : 12 (IRVKN)
ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.

1 2 3 4 5 6 7 8 9 10 11 12