ಕೀರ್ತನೆಗಳು 77 : 1 (IRVKN)
ದೇವರ ಮಹತ್ಕಾರ್ಯಗಳ ಧ್ಯಾನ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. *ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
ಕೀರ್ತನೆಗಳು 77 : 2 (IRVKN)
ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
ಕೀರ್ತನೆಗಳು 77 : 3 (IRVKN)
ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
ಕೀರ್ತನೆಗಳು 77 : 4 (IRVKN)
ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
ಕೀರ್ತನೆಗಳು 77 : 5 (IRVKN)
ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
ಕೀರ್ತನೆಗಳು 77 : 6 (IRVKN)
ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
ಕೀರ್ತನೆಗಳು 77 : 7 (IRVKN)
“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
ಕೀರ್ತನೆಗಳು 77 : 8 (IRVKN)
ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
ಕೀರ್ತನೆಗಳು 77 : 9 (IRVKN)
ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು QSS ಸೆಲಾ SE
ಕೀರ್ತನೆಗಳು 77 : 10 (IRVKN)
ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
ಕೀರ್ತನೆಗಳು 77 : 11 (IRVKN)
ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
ಕೀರ್ತನೆಗಳು 77 : 12 (IRVKN)
ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
ಕೀರ್ತನೆಗಳು 77 : 13 (IRVKN)
ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
ಕೀರ್ತನೆಗಳು 77 : 14 (IRVKN)
ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
ಕೀರ್ತನೆಗಳು 77 : 15 (IRVKN)
ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. QSS ಸೆಲಾ SE
ಕೀರ್ತನೆಗಳು 77 : 16 (IRVKN)
ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
ಕೀರ್ತನೆಗಳು 77 : 17 (IRVKN)
ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
ಕೀರ್ತನೆಗಳು 77 : 18 (IRVKN)
ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
ಕೀರ್ತನೆಗಳು 77 : 19 (IRVKN)
ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
ಕೀರ್ತನೆಗಳು 77 : 20 (IRVKN)
ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

1 2 3 4 5 6 7 8 9 10 11 12 13 14 15 16 17 18 19 20