ಕೀರ್ತನೆಗಳು 78 : 1 (IRVKN)
ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ *ಆಸಾಫನ ಪದ್ಯ.
ಕೀರ್ತ 105; 106; ಧರ್ಮೋ 32 *
ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
ಕೀರ್ತನೆಗಳು 78 : 2 (IRVKN)
ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
ಕೀರ್ತನೆಗಳು 78 : 3 (IRVKN)
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
ಕೀರ್ತನೆಗಳು 78 : 4 (IRVKN)
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
ಕೀರ್ತನೆಗಳು 78 : 5 (IRVKN)
ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
ಕೀರ್ತನೆಗಳು 78 : 6 (IRVKN)
ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
ಕೀರ್ತನೆಗಳು 78 : 7 (IRVKN)
ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
ಕೀರ್ತನೆಗಳು 78 : 8 (IRVKN)
ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.
ಕೀರ್ತನೆಗಳು 78 : 9 (IRVKN)
ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
ಕೀರ್ತನೆಗಳು 78 : 10 (IRVKN)
ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
ಕೀರ್ತನೆಗಳು 78 : 11 (IRVKN)
ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
ಕೀರ್ತನೆಗಳು 78 : 12 (IRVKN)
ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
ಕೀರ್ತನೆಗಳು 78 : 13 (IRVKN)
ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
ಕೀರ್ತನೆಗಳು 78 : 14 (IRVKN)
ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.
ಕೀರ್ತನೆಗಳು 78 : 15 (IRVKN)
ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
ಕೀರ್ತನೆಗಳು 78 : 16 (IRVKN)
ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.
ಕೀರ್ತನೆಗಳು 78 : 17 (IRVKN)
ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
ಕೀರ್ತನೆಗಳು 78 : 18 (IRVKN)
ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
ಕೀರ್ತನೆಗಳು 78 : 19 (IRVKN)
ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
ಕೀರ್ತನೆಗಳು 78 : 20 (IRVKN)
ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
ಕೀರ್ತನೆಗಳು 78 : 21 (IRVKN)
ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
ಕೀರ್ತನೆಗಳು 78 : 22 (IRVKN)
ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
ಕೀರ್ತನೆಗಳು 78 : 23 (IRVKN)
ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
ಕೀರ್ತನೆಗಳು 78 : 24 (IRVKN)
ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
ಕೀರ್ತನೆಗಳು 78 : 25 (IRVKN)
ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
ಕೀರ್ತನೆಗಳು 78 : 26 (IRVKN)
ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
ಕೀರ್ತನೆಗಳು 78 : 27 (IRVKN)
ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
ಕೀರ್ತನೆಗಳು 78 : 28 (IRVKN)
ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
ಕೀರ್ತನೆಗಳು 78 : 29 (IRVKN)
ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
ಕೀರ್ತನೆಗಳು 78 : 30 (IRVKN)
ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
ಕೀರ್ತನೆಗಳು 78 : 31 (IRVKN)
ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
ಕೀರ್ತನೆಗಳು 78 : 32 (IRVKN)
ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
ಕೀರ್ತನೆಗಳು 78 : 33 (IRVKN)
ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
ಕೀರ್ತನೆಗಳು 78 : 34 (IRVKN)
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ಕೀರ್ತನೆಗಳು 78 : 35 (IRVKN)
ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
ಕೀರ್ತನೆಗಳು 78 : 36 (IRVKN)
ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
ಕೀರ್ತನೆಗಳು 78 : 37 (IRVKN)
ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
ಕೀರ್ತನೆಗಳು 78 : 38 (IRVKN)
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಕೀರ್ತನೆಗಳು 78 : 39 (IRVKN)
ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
ಕೀರ್ತನೆಗಳು 78 : 40 (IRVKN)
ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
ಕೀರ್ತನೆಗಳು 78 : 41 (IRVKN)
ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
ಕೀರ್ತನೆಗಳು 78 : 42 (IRVKN)
ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
ಕೀರ್ತನೆಗಳು 78 : 43 (IRVKN)
ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
ಕೀರ್ತನೆಗಳು 78 : 44 (IRVKN)
ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
ಕೀರ್ತನೆಗಳು 78 : 45 (IRVKN)
ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
ಕೀರ್ತನೆಗಳು 78 : 46 (IRVKN)
ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
ಕೀರ್ತನೆಗಳು 78 : 47 (IRVKN)
ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
ಕೀರ್ತನೆಗಳು 78 : 48 (IRVKN)
ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
ಕೀರ್ತನೆಗಳು 78 : 49 (IRVKN)
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
ಕೀರ್ತನೆಗಳು 78 : 50 (IRVKN)
ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
ಕೀರ್ತನೆಗಳು 78 : 51 (IRVKN)
ಹಾಮನ ವಂಶದವರ* ಹಾಮನ ವಂಶದವರ ಅಥವಾ ಹಾಮನ ಡೇರೆಗಳು ಐಗುಪ್ತದ ಬಗ್ಗೆ ಮಾತನಾಡುವ ರೀತಿಯಾಗಿದೆ (ನೋಡಿರಿ 105:23,27; 106:22, ಅಲ್ಲಿ ಐಗುಪ್ತವನ್ನು “ಹಾಮನ ದೇಶ” ಎಂದು ಕರೆಯಲಾಗಿದೆ). ಹಾಮನು, ನೋಹನ ಮಕ್ಕಳಲ್ಲಿ ಒಬ್ಬನಾಗಿದ್ದನು, ಅವನನ್ನು ಐಗುಪ್ತದವರ ಪೂರ್ವಜನೆಂದು ಪರಿಗಣಿಸಲ್ಪಟ್ಟಿದ್ದಾನೆ (ಆದಿ 10:6 ನೋಡಿರಿ). ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
ಕೀರ್ತನೆಗಳು 78 : 52 (IRVKN)
ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
ಕೀರ್ತನೆಗಳು 78 : 53 (IRVKN)
ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
ಕೀರ್ತನೆಗಳು 78 : 54 (IRVKN)
ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
ಕೀರ್ತನೆಗಳು 78 : 55 (IRVKN)
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
ಕೀರ್ತನೆಗಳು 78 : 56 (IRVKN)
ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,
ಕೀರ್ತನೆಗಳು 78 : 57 (IRVKN)
ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
ಕೀರ್ತನೆಗಳು 78 : 58 (IRVKN)
ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
ಕೀರ್ತನೆಗಳು 78 : 59 (IRVKN)
ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
ಕೀರ್ತನೆಗಳು 78 : 60 (IRVKN)
ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಶಿಲೋವ್ ಶಿಲೋವ್ ಎಫ್ರಾಯೀಮ್ ಕುಲದ ಪ್ರದೇಶದಲ್ಲಿರುವ ಪಟ್ಟಣವಾಗಿದೆ, ಯೆರೂಸಲೇಮಿನ ಉತ್ತರ ಭಾಗಕ್ಕೆ 32 ಕಿಲೋಮೀಟರ್ ದೂರವಿದೆ, ಇಸ್ರಾಯೇಲಿನ ಇತಿಹಾಸದ ಆರಂಭಿಕ ದಿನಗಳಲ್ಲಿ ಮಂಜೂಷ ಪೆಟ್ಟಿಗೆಯನ್ನು ಅಲ್ಲಿ ಇಡಲಾಗಿತ್ತು (ಯೆಹೋ. 18:1; 1 ಸಮು 1:3 ನೋಡಿರಿ). ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ‡ ನಿವಾಸಸ್ಥಾನವನ್ನು ಅಥವಾ ಗುಡಾರವನ್ನು. ತ್ಯಜಿಸಿಬಿಟ್ಟು,
ಕೀರ್ತನೆಗಳು 78 : 61 (IRVKN)
ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
ಕೀರ್ತನೆಗಳು 78 : 62 (IRVKN)
ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
ಕೀರ್ತನೆಗಳು 78 : 63 (IRVKN)
ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.
ಕೀರ್ತನೆಗಳು 78 : 64 (IRVKN)
ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
ಕೀರ್ತನೆಗಳು 78 : 65 (IRVKN)
ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,
ಕೀರ್ತನೆಗಳು 78 : 66 (IRVKN)
ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.
ಕೀರ್ತನೆಗಳು 78 : 67 (IRVKN)
ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,
ಕೀರ್ತನೆಗಳು 78 : 68 (IRVKN)
ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ಕೀರ್ತನೆಗಳು 78 : 69 (IRVKN)
ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.
ಕೀರ್ತನೆಗಳು 78 : 70 (IRVKN)
ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,
ಕೀರ್ತನೆಗಳು 78 : 71 (IRVKN)
ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
ಕೀರ್ತನೆಗಳು 78 : 72 (IRVKN)
ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63 64 65 66 67 68 69 70 71 72