ಕೀರ್ತನೆಗಳು 8 : 1 (IRVKN)
ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. *ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
ಕೀರ್ತನೆಗಳು 8 : 2 (IRVKN)
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
ಕೀರ್ತನೆಗಳು 8 : 3 (IRVKN)
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
ಕೀರ್ತನೆಗಳು 8 : 4 (IRVKN)
ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಕೀರ್ತನೆಗಳು 8 : 5 (IRVKN)
ಅವನನ್ನು ದೇವರಿಗಿಂತ* ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
ಕೀರ್ತನೆಗಳು 8 : 6 (IRVKN)
ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ † ಇಬ್ರಿಯ 2:6-9 ಅನ್ನು ನೋಡಿರಿ. ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
ಕೀರ್ತನೆಗಳು 8 : 7 (IRVKN)
ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
ಕೀರ್ತನೆಗಳು 8 : 8 (IRVKN)
ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
ಕೀರ್ತನೆಗಳು 8 : 9 (IRVKN)
ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
❮
❯
1
2
3
4
5
6
7
8
9