ಕೀರ್ತನೆಗಳು 8 : 1 (IRVKN)
ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [QBR] ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. [QBR]
ಕೀರ್ತನೆಗಳು 8 : 2 (IRVKN)
ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ [QBR] ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, [QBR] ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ [QBR] ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. [QBR]
ಕೀರ್ತನೆಗಳು 8 : 3 (IRVKN)
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, [QBR] ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, [QBR]
ಕೀರ್ತನೆಗಳು 8 : 4 (IRVKN)
ಮನುಷ್ಯನು ಎಷ್ಟು ಮಾತ್ರದವನು, [QBR] ಅವನನ್ನು ನೀನು ಏಕೆ ಸ್ಮರಿಸಬೇಕು? [QBR] ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? [QBR]
ಕೀರ್ತನೆಗಳು 8 : 5 (IRVKN)
ಅವನನ್ನು ದೇವರಿಗಿಂತ [* ದೇವರಿಗಿಂತ ಅಥವಾ ದೇವದೂತರಿಗಿಂತ.] ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; [QBR] ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. [QBR]
ಕೀರ್ತನೆಗಳು 8 : 6 (IRVKN)
ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ [QBR] [† ಇಬ್ರಿಯ 2:6-9 ಅನ್ನು ನೋಡಿರಿ.] ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. [QBR]
ಕೀರ್ತನೆಗಳು 8 : 7 (IRVKN)
ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, [QBR]
ಕೀರ್ತನೆಗಳು 8 : 8 (IRVKN)
ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, [QBR] ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, [QBR] ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. [QBR]
ಕೀರ್ತನೆಗಳು 8 : 9 (IRVKN)
ನಮ್ಮ ಕರ್ತನಾದ ಯೆಹೋವನೇ, [QBR] ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [PE]

1 2 3 4 5 6 7 8 9

BG:

Opacity:

Color:


Size:


Font: