ಕೀರ್ತನೆಗಳು 80 : 1 (IRVKN)
ದ್ರಾಕ್ಷಾಲತೆಯಂತಿರುವ ಇಸ್ರಾಯೇಲರನ್ನು ಪುನಃ ಸ್ಥಾಪಿಸಬೇಕೆಂಬ ಪ್ರಾರ್ಥನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ. *ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
ಕೀರ್ತನೆಗಳು 80 : 2 (IRVKN)
ಎಫ್ರಾಯೀಮ್, ಬೆನ್ಯಾಮೀನ್ ಮತ್ತು ಮನಸ್ಸೆ ಕುಲಗಳ ಮುಂದೆ ಹೋಗುವವನಾಗಿ, ನಿನ್ನ ಶೌರ್ಯವನ್ನು ತೋರ್ಪಡಿಸು; ಬಂದು ನಮಗೆ ಜಯಪ್ರದನಾಗು.
ಕೀರ್ತನೆಗಳು 80 : 3 (IRVKN)
ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ಕೀರ್ತನೆಗಳು 80 : 4 (IRVKN)
ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?
ಕೀರ್ತನೆಗಳು 80 : 5 (IRVKN)
ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.
ಕೀರ್ತನೆಗಳು 80 : 6 (IRVKN)
ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.
ಕೀರ್ತನೆಗಳು 80 : 7 (IRVKN)
ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.
ಕೀರ್ತನೆಗಳು 80 : 8 (IRVKN)
ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.
ಕೀರ್ತನೆಗಳು 80 : 9 (IRVKN)
ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
ಕೀರ್ತನೆಗಳು 80 : 10 (IRVKN)
ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.
ಕೀರ್ತನೆಗಳು 80 : 11 (IRVKN)
ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು.
ಕೀರ್ತನೆಗಳು 80 : 12 (IRVKN)
ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
ಕೀರ್ತನೆಗಳು 80 : 13 (IRVKN)
ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
ಕೀರ್ತನೆಗಳು 80 : 14 (IRVKN)
ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
ಕೀರ್ತನೆಗಳು 80 : 15 (IRVKN)
ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
ಕೀರ್ತನೆಗಳು 80 : 16 (IRVKN)
ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
ಕೀರ್ತನೆಗಳು 80 : 17 (IRVKN)
ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
ಕೀರ್ತನೆಗಳು 80 : 18 (IRVKN)
ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
ಕೀರ್ತನೆಗಳು 80 : 19 (IRVKN)
ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

1 2 3 4 5 6 7 8 9 10 11 12 13 14 15 16 17 18 19