ಕೀರ್ತನೆಗಳು 81 : 1 (IRVKN)
ದೇವಭಕ್ತಿಯ ವಿಷಯದಲ್ಲಿ ಪ್ರೋತ್ಸಾಹ ಮತ್ತು ಎಚ್ಚರಿಕೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ.
ಧರ್ಮೋ 32; ಕೀರ್ತ 8; 84 *ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
ಕೀರ್ತನೆಗಳು 81 : 2 (IRVKN)
ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.
ಕೀರ್ತನೆಗಳು 81 : 3 (IRVKN)
ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
ಕೀರ್ತನೆಗಳು 81 : 4 (IRVKN)
ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.
ಕೀರ್ತನೆಗಳು 81 : 5 (IRVKN)
ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
ಕೀರ್ತನೆಗಳು 81 : 6 (IRVKN)
“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
ಕೀರ್ತನೆಗಳು 81 : 7 (IRVKN)
ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. QSS ಸೆಲಾ.SE
ಕೀರ್ತನೆಗಳು 81 : 8 (IRVKN)
ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
ಕೀರ್ತನೆಗಳು 81 : 9 (IRVKN)
ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
ಕೀರ್ತನೆಗಳು 81 : 10 (IRVKN)
ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
ಕೀರ್ತನೆಗಳು 81 : 11 (IRVKN)
ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
ಕೀರ್ತನೆಗಳು 81 : 12 (IRVKN)
ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
ಕೀರ್ತನೆಗಳು 81 : 13 (IRVKN)
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!
ಕೀರ್ತನೆಗಳು 81 : 14 (IRVKN)
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.
ಕೀರ್ತನೆಗಳು 81 : 15 (IRVKN)
ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.
ಕೀರ್ತನೆಗಳು 81 : 16 (IRVKN)
ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.
❮
❯
1
2
3
4
5
6
7
8
9
10
11
12
13
14
15
16