ಕೀರ್ತನೆಗಳು 81 : 1 (IRVKN)
ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; [QBR] ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ. [QBR]
ಕೀರ್ತನೆಗಳು 81 : 2 (IRVKN)
ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; [QBR] ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ. [QBR]
ಕೀರ್ತನೆಗಳು 81 : 3 (IRVKN)
ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ. [QBR]
ಕೀರ್ತನೆಗಳು 81 : 4 (IRVKN)
ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; [QBR] ಇದು ಯಾಕೋಬ್ಯರ ದೇವರು ವಿಧಿಸಿದ್ದು. [QBR]
ಕೀರ್ತನೆಗಳು 81 : 5 (IRVKN)
ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, [QBR] ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. [QBR] ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ, [QBR]
ಕೀರ್ತನೆಗಳು 81 : 6 (IRVKN)
“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; [QBR] ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು. [QBR]
ಕೀರ್ತನೆಗಳು 81 : 7 (IRVKN)
ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; [QBR] ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; [QBR] ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
ಕೀರ್ತನೆಗಳು 81 : 8 (IRVKN)
ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, [QBR] ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು, [QBR]
ಕೀರ್ತನೆಗಳು 81 : 9 (IRVKN)
ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; [QBR] ಪರರ ದೇವತೆಗಳನ್ನು ಪೂಜಿಸಬಾರದು; [QBR]
ಕೀರ್ತನೆಗಳು 81 : 10 (IRVKN)
ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; [QBR] ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು. [QBR]
ಕೀರ್ತನೆಗಳು 81 : 11 (IRVKN)
ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; [QBR] ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ. [QBR]
ಕೀರ್ತನೆಗಳು 81 : 12 (IRVKN)
ಆದುದರಿಂದ ಇವರು ಹಟಮಾರಿಗಳು; [QBR] ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. [QBR]
ಕೀರ್ತನೆಗಳು 81 : 13 (IRVKN)
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, [QBR] ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು! [QBR]
ಕೀರ್ತನೆಗಳು 81 : 14 (IRVKN)
ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, [QBR] ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. [QBR]
ಕೀರ್ತನೆಗಳು 81 : 15 (IRVKN)
ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; [QBR] ಅವರಾದರೋ ಸದಾಕಾಲವೂ ಇರುವರು. [QBR]
ಕೀರ್ತನೆಗಳು 81 : 16 (IRVKN)
ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, [QBR] ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ. [PE]

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: