ಕೀರ್ತನೆಗಳು 82 : 1 (IRVKN)
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು *ಆಸಾಫನ ಕೀರ್ತನೆ.
ಕೀರ್ತ 58 *
ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು * ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
ಕೀರ್ತನೆಗಳು 82 : 2 (IRVKN)
“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? QSS ಸೆಲಾ.SE
ಕೀರ್ತನೆಗಳು 82 : 3 (IRVKN)
ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
ಕೀರ್ತನೆಗಳು 82 : 4 (IRVKN)
ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
ಕೀರ್ತನೆಗಳು 82 : 5 (IRVKN)
ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
ಕೀರ್ತನೆಗಳು 82 : 6 (IRVKN)
“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
ಕೀರ್ತನೆಗಳು 82 : 7 (IRVKN)
ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
ಕೀರ್ತನೆಗಳು 82 : 8 (IRVKN)
ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?

1 2 3 4 5 6 7 8