ಕೀರ್ತನೆಗಳು 83 : 1 (IRVKN)
ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ *ಆಸಾಫನ ಕೀರ್ತನೆ; ಗೀತೆ. *ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
ಕೀರ್ತನೆಗಳು 83 : 2 (IRVKN)
ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.
ಕೀರ್ತನೆಗಳು 83 : 3 (IRVKN)
ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,
ಕೀರ್ತನೆಗಳು 83 : 4 (IRVKN)
“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
ಕೀರ್ತನೆಗಳು 83 : 5 (IRVKN)
ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,
ಕೀರ್ತನೆಗಳು 83 : 6 (IRVKN)
ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,
ಕೀರ್ತನೆಗಳು 83 : 7 (IRVKN)
ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;
ಕೀರ್ತನೆಗಳು 83 : 8 (IRVKN)
ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. QSS ಸೆಲಾSE
ಕೀರ್ತನೆಗಳು 83 : 9 (IRVKN)
ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.
ಕೀರ್ತನೆಗಳು 83 : 10 (IRVKN)
ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
ಕೀರ್ತನೆಗಳು 83 : 11 (IRVKN)
ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
ಕೀರ್ತನೆಗಳು 83 : 12 (IRVKN)
ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.
ಕೀರ್ತನೆಗಳು 83 : 13 (IRVKN)
ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
ಕೀರ್ತನೆಗಳು 83 : 14 (IRVKN)
ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
ಕೀರ್ತನೆಗಳು 83 : 15 (IRVKN)
ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.
ಕೀರ್ತನೆಗಳು 83 : 16 (IRVKN)
ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.
ಕೀರ್ತನೆಗಳು 83 : 17 (IRVKN)
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.
ಕೀರ್ತನೆಗಳು 83 : 18 (IRVKN)
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

1 2 3 4 5 6 7 8 9 10 11 12 13 14 15 16 17 18