ಕೀರ್ತನೆಗಳು 84 : 1 (IRVKN)
ದೇವಾಲಯದ ಯಾತ್ರಿಕರ ಕೀರ್ತನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ.
ಕೀರ್ತ 8; 81 *ಸೇನಾಧೀಶ್ವರನಾದ ಯೆಹೋವನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
ಕೀರ್ತನೆಗಳು 84 : 2 (IRVKN)
ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
ಕೀರ್ತನೆಗಳು 84 : 3 (IRVKN)
ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!
ಕೀರ್ತನೆಗಳು 84 : 4 (IRVKN)
ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. QSS ಸೆಲಾSE
ಕೀರ್ತನೆಗಳು 84 : 5 (IRVKN)
ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,
ಕೀರ್ತನೆಗಳು 84 : 6 (IRVKN)
ಕಣ್ಣೀರಿನ ತಗ್ಗನ್ನು ದಾಟುವಾಗ, ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
ಕೀರ್ತನೆಗಳು 84 : 7 (IRVKN)
ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
ಕೀರ್ತನೆಗಳು 84 : 8 (IRVKN)
“ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು; ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. QSS ಸೆಲಾ SE
ಕೀರ್ತನೆಗಳು 84 : 9 (IRVKN)
ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು; ನಿನ್ನ ಅಭಿಷಿಕ್ತನ ಮುಖವನ್ನು ಕಟಾಕ್ಷಿಸು.
ಕೀರ್ತನೆಗಳು 84 : 10 (IRVKN)
ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.
ಕೀರ್ತನೆಗಳು 84 : 11 (IRVKN)
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ಕೀರ್ತನೆಗಳು 84 : 12 (IRVKN)
ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
❮
❯
1
2
3
4
5
6
7
8
9
10
11
12