ಕೀರ್ತನೆಗಳು 85 : 1 (IRVKN)
ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. *ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
ಕೀರ್ತನೆಗಳು 85 : 2 (IRVKN)
ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. QSS ಸೆಲಾ SE
ಕೀರ್ತನೆಗಳು 85 : 3 (IRVKN)
ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
ಕೀರ್ತನೆಗಳು 85 : 4 (IRVKN)
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
ಕೀರ್ತನೆಗಳು 85 : 5 (IRVKN)
ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
ಕೀರ್ತನೆಗಳು 85 : 6 (IRVKN)
ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
ಕೀರ್ತನೆಗಳು 85 : 7 (IRVKN)
ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
ಕೀರ್ತನೆಗಳು 85 : 8 (IRVKN)
ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
ಕೀರ್ತನೆಗಳು 85 : 9 (IRVKN)
ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
ಕೀರ್ತನೆಗಳು 85 : 10 (IRVKN)
ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
ಕೀರ್ತನೆಗಳು 85 : 11 (IRVKN)
ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
ಕೀರ್ತನೆಗಳು 85 : 12 (IRVKN)
ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
ಕೀರ್ತನೆಗಳು 85 : 13 (IRVKN)
ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

1 2 3 4 5 6 7 8 9 10 11 12 13