ಕೀರ್ತನೆಗಳು 85 : 1 (IRVKN)
ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; [QBR] ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. [QBR]
ಕೀರ್ತನೆಗಳು 85 : 2 (IRVKN)
ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; [QBR] ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
ಕೀರ್ತನೆಗಳು 85 : 3 (IRVKN)
ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; [QBR] ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. [QBR]
ಕೀರ್ತನೆಗಳು 85 : 4 (IRVKN)
ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; [QBR] ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. [QBR]
ಕೀರ್ತನೆಗಳು 85 : 5 (IRVKN)
ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? [QBR] ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? [QBR]
ಕೀರ್ತನೆಗಳು 85 : 6 (IRVKN)
ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, [QBR] ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? [QBR]
ಕೀರ್ತನೆಗಳು 85 : 7 (IRVKN)
ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; [QBR] ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. [QBR]
ಕೀರ್ತನೆಗಳು 85 : 8 (IRVKN)
ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. [QBR] ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. [QBR] ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. [QBR]
ಕೀರ್ತನೆಗಳು 85 : 9 (IRVKN)
ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. [QBR] ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. [QBR]
ಕೀರ್ತನೆಗಳು 85 : 10 (IRVKN)
ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; [QBR] ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. [QBR]
ಕೀರ್ತನೆಗಳು 85 : 11 (IRVKN)
ಸತ್ಯತೆಯು ಭೂಮಿಯಿಂದ ಹುಟ್ಟುವುದು; [QBR] ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. [QBR]
ಕೀರ್ತನೆಗಳು 85 : 12 (IRVKN)
ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; [QBR] ನಮ್ಮ ದೇಶವು ತನ್ನ ಬೆಳೆ ಕೊಡುವುದು. [QBR]
ಕೀರ್ತನೆಗಳು 85 : 13 (IRVKN)
ನೀತಿಯು ಆತನ ಮುಂದೆ ಹೋಗುತ್ತಾ, [QBR] ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: