ಕೀರ್ತನೆಗಳು 86 : 1 (IRVKN)
ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; [QBR] ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. [QBR]
ಕೀರ್ತನೆಗಳು 86 : 2 (IRVKN)
ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; [QBR] ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. [QBR]
ಕೀರ್ತನೆಗಳು 86 : 3 (IRVKN)
ಕರ್ತನೇ, ಕರುಣಿಸು; [QBR] ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. [QBR]
ಕೀರ್ತನೆಗಳು 86 : 4 (IRVKN)
ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; [QBR] ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. [QBR]
ಕೀರ್ತನೆಗಳು 86 : 5 (IRVKN)
ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, [QBR] ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. [QBR]
ಕೀರ್ತನೆಗಳು 86 : 6 (IRVKN)
ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; [QBR] ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. [QBR]
ಕೀರ್ತನೆಗಳು 86 : 7 (IRVKN)
ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, [QBR] ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. [QBR]
ಕೀರ್ತನೆಗಳು 86 : 8 (IRVKN)
ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; [QBR] ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. [QBR]
ಕೀರ್ತನೆಗಳು 86 : 9 (IRVKN)
ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, [QBR] ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. [QBR]
ಕೀರ್ತನೆಗಳು 86 : 10 (IRVKN)
ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; [QBR] ನೀನೊಬ್ಬನೇ ದೇವರು. [QBR]
ಕೀರ್ತನೆಗಳು 86 : 11 (IRVKN)
ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; [QBR] ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. [QBR] ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. [QBR]
ಕೀರ್ತನೆಗಳು 86 : 12 (IRVKN)
ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QBR] ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. [QBR]
ಕೀರ್ತನೆಗಳು 86 : 13 (IRVKN)
ನೀನು ಬಹಳವಾಗಿ ಕನಿಕರಿಸಿ, [QBR] ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. [QBR]
ಕೀರ್ತನೆಗಳು 86 : 14 (IRVKN)
ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QBR] ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. [QBR] ಅವರು ನಿನ್ನನ್ನು ಲಕ್ಷಿಸುವುದಿಲ್ಲ. [QBR]
ಕೀರ್ತನೆಗಳು 86 : 15 (IRVKN)
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; [QBR] ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. [QBR]
ಕೀರ್ತನೆಗಳು 86 : 16 (IRVKN)
ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; [QBR] ನಿನ್ನ ಸೇವಕಳ ಮಗನನ್ನು ರಕ್ಷಿಸು. [QBR]
ಕೀರ್ತನೆಗಳು 86 : 17 (IRVKN)
ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; [QBR] ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ [QBR] ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. [PE]

1 2 3 4 5 6 7 8 9 10 11 12 13 14 15 16 17

BG:

Opacity:

Color:


Size:


Font: