ಕೀರ್ತನೆಗಳು 88 : 1 (IRVKN)
ದುಃಖತಪ್ತನ ಮೊರೆ *ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ.
ಪ್ರಲಾ 3 *ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.
ಕೀರ್ತನೆಗಳು 88 : 2 (IRVKN)
ನನ್ನ ಪ್ರಾರ್ಥನೆಯು ನಿನ್ನ ಸನ್ನಿಧಿಯನ್ನು ಮುಟ್ಟಲಿ; ಕಿವಿಗೊಟ್ಟು ನನ್ನ ಕೂಗನ್ನು ಕೇಳು.
ಕೀರ್ತನೆಗಳು 88 : 3 (IRVKN)
ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.
ಕೀರ್ತನೆಗಳು 88 : 4 (IRVKN)
ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.
ಕೀರ್ತನೆಗಳು 88 : 5 (IRVKN)
ಸತ್ತವನ ಹಾಗೆ ನನ್ನನ್ನು ಹೊರಗೆ ಹಾಕಿದ್ದಾರೆ; ಹತನಾದವನಂತೆ ಸಮಾಧಿಯಲ್ಲಿ ಬಿದ್ದಿದ್ದೇನೆ. ಹತರಾದವರು ನಿನ್ನ ಪರಿಪಾಲನೆ ಇಲ್ಲದವರು; ಅಂಥವರನ್ನು ನೀನು ನೆನಪು ಮಾಡಿಕೊಳ್ಳುವುದಿಲ್ಲ.
ಕೀರ್ತನೆಗಳು 88 : 6 (IRVKN)
ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.
ಕೀರ್ತನೆಗಳು 88 : 7 (IRVKN)
ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. QSS ಸೆಲಾ SE
ಕೀರ್ತನೆಗಳು 88 : 8 (IRVKN)
ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.
ಕೀರ್ತನೆಗಳು 88 : 9 (IRVKN)
ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.
ಕೀರ್ತನೆಗಳು 88 : 10 (IRVKN)
ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? QSS ಸೆಲಾ SE
ಕೀರ್ತನೆಗಳು 88 : 11 (IRVKN)
ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?
ಕೀರ್ತನೆಗಳು 88 : 12 (IRVKN)
ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?
ಕೀರ್ತನೆಗಳು 88 : 13 (IRVKN)
ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
ಕೀರ್ತನೆಗಳು 88 : 14 (IRVKN)
ಯೆಹೋವನೇ, ನನ್ನ ಪ್ರಾಣವನ್ನೇಕೆ ತಳ್ಳಿಬಿಟ್ಟಿ? ನಿನ್ನ ಮುಖವನ್ನು ಮರೆಮಾಡಿದ್ದೇಕೆ?
ಕೀರ್ತನೆಗಳು 88 : 15 (IRVKN)
ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
ಕೀರ್ತನೆಗಳು 88 : 16 (IRVKN)
ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.
ಕೀರ್ತನೆಗಳು 88 : 17 (IRVKN)
ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.
ಕೀರ್ತನೆಗಳು 88 : 18 (IRVKN)
ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.
❮
❯
1
2
3
4
5
6
7
8
9
10
11
12
13
14
15
16
17
18