ಕೀರ್ತನೆಗಳು 89 : 1 (IRVKN)
ಸರ್ವಶಕ್ತನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಪ್ರಾರ್ಥನೆ *ಜೇರಹ ಕುಲದವನಾದ ಏತಾನನ ಪದ್ಯ.
2ಸಮು 7; ಕೀರ್ತ 44; 80 *
ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.
ಕೀರ್ತನೆಗಳು 89 : 2 (IRVKN)
ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
ಕೀರ್ತನೆಗಳು 89 : 3 (IRVKN)
ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
ಕೀರ್ತನೆಗಳು 89 : 4 (IRVKN)
‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’ ” ಎಂಬುವುದೇ. QSS ಸೆಲಾ SE
ಕೀರ್ತನೆಗಳು 89 : 5 (IRVKN)
ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.
ಕೀರ್ತನೆಗಳು 89 : 6 (IRVKN)
ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?
ಕೀರ್ತನೆಗಳು 89 : 7 (IRVKN)
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
ಕೀರ್ತನೆಗಳು 89 : 8 (IRVKN)
ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.
ಕೀರ್ತನೆಗಳು 89 : 9 (IRVKN)
ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.
ಕೀರ್ತನೆಗಳು 89 : 10 (IRVKN)
ರಹಬನ್ನು* ರಹಬನ್ನು ಪೌರಾಣಿಕ ಸಮುದ್ರ ದೈತ್ಯ ರಹಬನು ಯೋಬ. 9:13; 26:2; ಯೆಶಾ 51:9 ರಲ್ಲಿ ಕೂಡ ಉಲ್ಲೇಖಿಸಲಾಗಿದೆ; 87:4 ರಲ್ಲಿ ಅದರ ಬಳಕೆಯು ಭಿನ್ನವಾಗಿದೆ, ಇಲ್ಲಿ ರಹಬ ಕಡಲ ಪೌರಾಣಿಕ ಸರ್ಪವನ್ನು ಸೂಚಿಸುತ್ತದೆ. ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.
ಕೀರ್ತನೆಗಳು 89 : 11 (IRVKN)
ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.
ಕೀರ್ತನೆಗಳು 89 : 12 (IRVKN)
ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್ ತಾಬೋರ್ ತಾಬೋರ್ ಗಲಿಲಾಯ ಸರೋವರದ ದಕ್ಷಿಣದ ತುದಿಯಲ್ಲಿರುವ ಪರ್ವತವಾಗಿದೆ, 555 ಮೀಟರ್ ಎತ್ತರವಿದೆ. , ಹೆರ್ಮೋನ್ ‡ ಹೆರ್ಮೋನ್ ಹೆರ್ಮೋನ್ ಪರ್ವತವು ಗಲಿಲಾಯ ಸರೋವರದಿಂದ 75 ಕಿಲೋಮೀಟರ್ (45 ಮೈಲುಗಳು) ಈಶಾನ್ಯ ಭಾಗದಲ್ಲಿದೆ, ಸುಮಾರು 2,750 ಮೀಟರ್ (8,940 ಅಡಿ) ಎತ್ತರವಿದೆ. ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
ಕೀರ್ತನೆಗಳು 89 : 13 (IRVKN)
ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
ಕೀರ್ತನೆಗಳು 89 : 14 (IRVKN)
ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
ಕೀರ್ತನೆಗಳು 89 : 15 (IRVKN)
ಉತ್ಸಾಹಧ್ವನಿಯನ್ನು § ಉತ್ಸಾಹಧ್ವನಿಯನ್ನು ಅಂದರೆ ದೇವರನ್ನು ಆರಾಧಿಸುವಾಗ ಮಾಡುವ ಶಬ್ದ. ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
ಕೀರ್ತನೆಗಳು 89 : 16 (IRVKN)
ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.
ಕೀರ್ತನೆಗಳು 89 : 17 (IRVKN)
ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು* ಕೊಂಬು ಅಂದರೆ ಬಲ. ಎತ್ತಲ್ಪಟ್ಟಿರುವುದು.
ಕೀರ್ತನೆಗಳು 89 : 18 (IRVKN)
ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.
ಕೀರ್ತನೆಗಳು 89 : 19 (IRVKN)
ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.
ಕೀರ್ತನೆಗಳು 89 : 20 (IRVKN)
ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
ಕೀರ್ತನೆಗಳು 89 : 21 (IRVKN)
ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
ಕೀರ್ತನೆಗಳು 89 : 22 (IRVKN)
ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.
ಕೀರ್ತನೆಗಳು 89 : 23 (IRVKN)
ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು.
ಕೀರ್ತನೆಗಳು 89 : 24 (IRVKN)
ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.
ಕೀರ್ತನೆಗಳು 89 : 25 (IRVKN)
ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು.
ಕೀರ್ತನೆಗಳು 89 : 26 (IRVKN)
ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.
ಕೀರ್ತನೆಗಳು 89 : 27 (IRVKN)
ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
ಕೀರ್ತನೆಗಳು 89 : 28 (IRVKN)
ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.
ಕೀರ್ತನೆಗಳು 89 : 29 (IRVKN)
ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.
ಕೀರ್ತನೆಗಳು 89 : 30 (IRVKN)
ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
ಕೀರ್ತನೆಗಳು 89 : 31 (IRVKN)
ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
ಕೀರ್ತನೆಗಳು 89 : 32 (IRVKN)
ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.
ಕೀರ್ತನೆಗಳು 89 : 33 (IRVKN)
ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ.
ಕೀರ್ತನೆಗಳು 89 : 34 (IRVKN)
ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; ನನ್ನ ಮಾತನ್ನು ಬದಲಿಸುವುದಿಲ್ಲ.
ಕೀರ್ತನೆಗಳು 89 : 35 (IRVKN)
ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
ಕೀರ್ತನೆಗಳು 89 : 36 (IRVKN)
ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
ಕೀರ್ತನೆಗಳು 89 : 37 (IRVKN)
ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” QSS ಸೆಲಾ. SE
ಕೀರ್ತನೆಗಳು 89 : 38 (IRVKN)
ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
ಕೀರ್ತನೆಗಳು 89 : 39 (IRVKN)
ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
ಕೀರ್ತನೆಗಳು 89 : 40 (IRVKN)
ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
ಕೀರ್ತನೆಗಳು 89 : 41 (IRVKN)
ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
ಕೀರ್ತನೆಗಳು 89 : 42 (IRVKN)
ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
ಕೀರ್ತನೆಗಳು 89 : 43 (IRVKN)
ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
ಕೀರ್ತನೆಗಳು 89 : 44 (IRVKN)
ಅವನ ವೈಭವವನ್ನು ವೈಭವವನ್ನು ಅಂದರೆ ರಾಜದಂಡ. ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
ಕೀರ್ತನೆಗಳು 89 : 45 (IRVKN)
ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. QSS ಸೆಲಾ SE
ಕೀರ್ತನೆಗಳು 89 : 46 (IRVKN)
ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?
ಕೀರ್ತನೆಗಳು 89 : 47 (IRVKN)
ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.
ಕೀರ್ತನೆಗಳು 89 : 48 (IRVKN)
ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? QSS ಸೆಲಾ SE
ಕೀರ್ತನೆಗಳು 89 : 49 (IRVKN)
ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ?
ಕೀರ್ತನೆಗಳು 89 : 50 (IRVKN)
ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ.
ಕೀರ್ತನೆಗಳು 89 : 51 (IRVKN)
ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.
ಕೀರ್ತನೆಗಳು 89 : 52 (IRVKN)
ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52