ಕೀರ್ತನೆಗಳು 9 : 1 (IRVKN)
ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QBR] ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. [QBR]
ಕೀರ್ತನೆಗಳು 9 : 2 (IRVKN)
ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; [QBR] ನಿನ್ನ ಹೆಸರನ್ನು ಕೀರ್ತಿಸುವೆನು. [QBR]
ಕೀರ್ತನೆಗಳು 9 : 3 (IRVKN)
ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. [QBR]
ಕೀರ್ತನೆಗಳು 9 : 4 (IRVKN)
ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; [QBR] ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. [QBR]
ಕೀರ್ತನೆಗಳು 9 : 5 (IRVKN)
ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, [QBR] ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. [QBR]
ಕೀರ್ತನೆಗಳು 9 : 6 (IRVKN)
ಶತ್ರುಗಳು ನಿಶ್ಶೇಷವಾದರು; [QBR] ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. [QBR] ಅವರ ಸ್ಮರಣೆಯೇ ಇಲ್ಲವಾಯಿತು. [QBR]
ಕೀರ್ತನೆಗಳು 9 : 7 (IRVKN)
ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, [QBR] ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. [QBR]
ಕೀರ್ತನೆಗಳು 9 : 8 (IRVKN)
ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; [QBR] ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. [QBR]
ಕೀರ್ತನೆಗಳು 9 : 9 (IRVKN)
ಯೆಹೋವನು ಕುಗ್ಗಿದವರಿಗೆ ಆಶ್ರಯವೂ, [QBR] ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. [QBR]
ಕೀರ್ತನೆಗಳು 9 : 10 (IRVKN)
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು [QBR] ನಿನ್ನಲ್ಲಿ ಭರವಸವಿಡುವರು; [QBR] ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. [QBR]
ಕೀರ್ತನೆಗಳು 9 : 11 (IRVKN)
ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; [QBR] ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QBR]
ಕೀರ್ತನೆಗಳು 9 : 12 (IRVKN)
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ [QBR] ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. [QBR]
ಕೀರ್ತನೆಗಳು 9 : 13 (IRVKN)
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; [QBR] ನನ್ನನ್ನು ಉದ್ಧರಿಸುವವನೇ, ಕನಿಕರಿಸು; [QBR] ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. [QBR]
ಕೀರ್ತನೆಗಳು 9 : 14 (IRVKN)
ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; [QBR] ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. [QBR]
ಕೀರ್ತನೆಗಳು 9 : 15 (IRVKN)
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; [QBR] ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. [QBR]
ಕೀರ್ತನೆಗಳು 9 : 16 (IRVKN)
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; [QBR] ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
ಕೀರ್ತನೆಗಳು 9 : 17 (IRVKN)
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ [QBR] ಪಾತಾಳಕ್ಕೆ ಇಳಿದುಹೋಗುವರು. [QBR]
ಕೀರ್ತನೆಗಳು 9 : 18 (IRVKN)
ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; [QBR] ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. [QBR]
ಕೀರ್ತನೆಗಳು 9 : 19 (IRVKN)
ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. [QBR] ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. [QBR]
ಕೀರ್ತನೆಗಳು 9 : 20 (IRVKN)
ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; [QBR] ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. [PE]
❮
❯