ಕೀರ್ತನೆಗಳು 9 : 1 (IRVKN)
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. *ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
ಕೀರ್ತನೆಗಳು 9 : 2 (IRVKN)
ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
ಕೀರ್ತನೆಗಳು 9 : 3 (IRVKN)
ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
ಕೀರ್ತನೆಗಳು 9 : 4 (IRVKN)
ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
ಕೀರ್ತನೆಗಳು 9 : 5 (IRVKN)
ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
ಕೀರ್ತನೆಗಳು 9 : 6 (IRVKN)
ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
ಕೀರ್ತನೆಗಳು 9 : 7 (IRVKN)
ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
ಕೀರ್ತನೆಗಳು 9 : 8 (IRVKN)
ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
ಕೀರ್ತನೆಗಳು 9 : 9 (IRVKN)
ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಕೀರ್ತನೆಗಳು 9 : 10 (IRVKN)
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಕೀರ್ತನೆಗಳು 9 : 11 (IRVKN)
ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
ಕೀರ್ತನೆಗಳು 9 : 12 (IRVKN)
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
ಕೀರ್ತನೆಗಳು 9 : 13 (IRVKN)
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
ಕೀರ್ತನೆಗಳು 9 : 14 (IRVKN)
ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
ಕೀರ್ತನೆಗಳು 9 : 15 (IRVKN)
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ಕೀರ್ತನೆಗಳು 9 : 16 (IRVKN)
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ QSS ಸೆಲಾ SE
ಕೀರ್ತನೆಗಳು 9 : 17 (IRVKN)
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
ಕೀರ್ತನೆಗಳು 9 : 18 (IRVKN)
ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
ಕೀರ್ತನೆಗಳು 9 : 19 (IRVKN)
ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
ಕೀರ್ತನೆಗಳು 9 : 20 (IRVKN)
ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. QSS ಸೆಲಾ. SE
❮
❯
1
2
3
4
5
6
7
8
9
10
11
12
13
14
15
16
17
18
19
20