ಕೀರ್ತನೆಗಳು 90 : 1 (IRVKN)
ಚತುರ್ಥ ಭಾಗ (90-106) ಪಾಪಾತ್ಮರಿಗೆ ದೇವರ ದಯವೇ ಆಶ್ರಯ *ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
ಧರ್ಮೋ 32 *
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
ಕೀರ್ತನೆಗಳು 90 : 2 (IRVKN)
ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
ಕೀರ್ತನೆಗಳು 90 : 3 (IRVKN)
“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.
ಕೀರ್ತನೆಗಳು 90 : 4 (IRVKN)
ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.
ಕೀರ್ತನೆಗಳು 90 : 5 (IRVKN)
ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
ಕೀರ್ತನೆಗಳು 90 : 6 (IRVKN)
ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.
ಕೀರ್ತನೆಗಳು 90 : 7 (IRVKN)
ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.
ಕೀರ್ತನೆಗಳು 90 : 8 (IRVKN)
ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.
ಕೀರ್ತನೆಗಳು 90 : 9 (IRVKN)
ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.
ಕೀರ್ತನೆಗಳು 90 : 10 (IRVKN)
ನಮ್ಮ ಆಯುಷ್ಕಾಲವು* ಆಯುಷ್ಕಾಲವು ಅಥವಾ ಪ್ರತಾಪ. ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
ಕೀರ್ತನೆಗಳು 90 : 11 (IRVKN)
ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
ಕೀರ್ತನೆಗಳು 90 : 12 (IRVKN)
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ಕೀರ್ತನೆಗಳು 90 : 13 (IRVKN)
ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.
ಕೀರ್ತನೆಗಳು 90 : 14 (IRVKN)
ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
ಕೀರ್ತನೆಗಳು 90 : 15 (IRVKN)
ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.
ಕೀರ್ತನೆಗಳು 90 : 16 (IRVKN)
ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.
ಕೀರ್ತನೆಗಳು 90 : 17 (IRVKN)
ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.

1 2 3 4 5 6 7 8 9 10 11 12 13 14 15 16 17