ಕೀರ್ತನೆಗಳು 92 : 1 (IRVKN)
ದೇವರ ನೀತಿಸಾಧನೆಗಳನ್ನು ಹೊಗಳುವುದು *ಕೀರ್ತನೆ; ಸಬ್ಬತ್ ದಿನದ ಗೀತೆ. *ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ಕೀರ್ತನೆಗಳು 92 : 2 (IRVKN)
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
ಕೀರ್ತನೆಗಳು 92 : 3 (IRVKN)
ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
ಕೀರ್ತನೆಗಳು 92 : 4 (IRVKN)
ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
ಕೀರ್ತನೆಗಳು 92 : 5 (IRVKN)
ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
ಕೀರ್ತನೆಗಳು 92 : 6 (IRVKN)
ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
ಕೀರ್ತನೆಗಳು 92 : 7 (IRVKN)
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
ಕೀರ್ತನೆಗಳು 92 : 8 (IRVKN)
ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
ಕೀರ್ತನೆಗಳು 92 : 9 (IRVKN)
ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
ಕೀರ್ತನೆಗಳು 92 : 10 (IRVKN)
ಆದರೆ ನನ್ನ ಕೊಂಬನ್ನು* ಕೊಂಬನ್ನು ಅಥವಾ ಬಲ. ಕಾಡುಕೋಣದ ಕೊಂಬಿನಂತೆ † ಕೊಂಬಿನಂತೆ ಅಥವಾ ಬಲ. ಎತ್ತಿದ್ದಿ; ‡ ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ. ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
ಕೀರ್ತನೆಗಳು 92 : 11 (IRVKN)
ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
ಕೀರ್ತನೆಗಳು 92 : 12 (IRVKN)
ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
ಕೀರ್ತನೆಗಳು 92 : 13 (IRVKN)
ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
ಕೀರ್ತನೆಗಳು 92 : 14 (IRVKN)
ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
ಕೀರ್ತನೆಗಳು 92 : 15 (IRVKN)
ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
❮
❯
1
2
3
4
5
6
7
8
9
10
11
12
13
14
15