ಕೀರ್ತನೆಗಳು 93 : 1 (IRVKN)
ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
ವಿಮೋ 15; ಯೆಶಾ 52:7; ಕೀರ್ತ 96; 97; 99
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
ಕೀರ್ತನೆಗಳು 93 : 2 (IRVKN)
ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.
ಕೀರ್ತನೆಗಳು 93 : 3 (IRVKN)
ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
ಕೀರ್ತನೆಗಳು 93 : 4 (IRVKN)
ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
ಕೀರ್ತನೆಗಳು 93 : 5 (IRVKN)
ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

1 2 3 4 5