ಕೀರ್ತನೆಗಳು 94 : 1 (IRVKN)
ದೇವರ ಶಿಕ್ಷೆ ಮತ್ತು ರಕ್ಷಣೆಗೆ ಒಳಗಾದವನು ಧನ್ಯನು ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.* ಕೋಪವನ್ನು ತೋರ್ಪಡಿಸು. ಅಥವಾ ಪ್ರಕಾಶಿಸು.
ಕೀರ್ತನೆಗಳು 94 : 2 (IRVKN)
ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
ಕೀರ್ತನೆಗಳು 94 : 3 (IRVKN)
ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
ಕೀರ್ತನೆಗಳು 94 : 4 (IRVKN)
ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
ಕೀರ್ತನೆಗಳು 94 : 5 (IRVKN)
ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
ಕೀರ್ತನೆಗಳು 94 : 6 (IRVKN)
ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
ಕೀರ್ತನೆಗಳು 94 : 7 (IRVKN)
ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
ಕೀರ್ತನೆಗಳು 94 : 8 (IRVKN)
ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
ಕೀರ್ತನೆಗಳು 94 : 9 (IRVKN)
ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
ಕೀರ್ತನೆಗಳು 94 : 10 (IRVKN)
ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
ಕೀರ್ತನೆಗಳು 94 : 11 (IRVKN)
ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
ಕೀರ್ತನೆಗಳು 94 : 12 (IRVKN)
ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
ಕೀರ್ತನೆಗಳು 94 : 13 (IRVKN)
ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
ಕೀರ್ತನೆಗಳು 94 : 14 (IRVKN)
ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
ಕೀರ್ತನೆಗಳು 94 : 15 (IRVKN)
ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
ಕೀರ್ತನೆಗಳು 94 : 16 (IRVKN)
ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
ಕೀರ್ತನೆಗಳು 94 : 17 (IRVKN)
ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
ಕೀರ್ತನೆಗಳು 94 : 18 (IRVKN)
ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
ಕೀರ್ತನೆಗಳು 94 : 19 (IRVKN)
ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಕೀರ್ತನೆಗಳು 94 : 20 (IRVKN)
ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
ಕೀರ್ತನೆಗಳು 94 : 21 (IRVKN)
ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
ಕೀರ್ತನೆಗಳು 94 : 22 (IRVKN)
ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
ಕೀರ್ತನೆಗಳು 94 : 23 (IRVKN)
ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23