ಕೀರ್ತನೆಗಳು 95 : 1 (IRVKN)
ದೇವರನ್ನು ವಿಶ್ವಾಸದಿಂದ ಆರಾಧಿಸುವುದು
ಕೀರ್ತ 81; 96-100 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
ಕೀರ್ತನೆಗಳು 95 : 2 (IRVKN)
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಕೀರ್ತನೆಗಳು 95 : 3 (IRVKN)
ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
ಕೀರ್ತನೆಗಳು 95 : 4 (IRVKN)
ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.
ಕೀರ್ತನೆಗಳು 95 : 5 (IRVKN)
ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
ಕೀರ್ತನೆಗಳು 95 : 6 (IRVKN)
ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.
ಕೀರ್ತನೆಗಳು 95 : 7 (IRVKN)
ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
ಕೀರ್ತನೆಗಳು 95 : 8 (IRVKN)
ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ* ಮೆರೀಬ ಅಂದರೆ ವಾಗ್ವಾದ. , ಮಸ್ಸಾದಲ್ಲಿ [† ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33: 8 ] ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ಕೀರ್ತನೆಗಳು 95 : 9 (IRVKN)
ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
ಕೀರ್ತನೆಗಳು 95 : 10 (IRVKN)
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು‡ ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ” ಎಂದು ಹೇಳಿದೆನು.
ಕೀರ್ತನೆಗಳು 95 : 11 (IRVKN)
ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
❮
❯