ಕೀರ್ತನೆಗಳು 96 : 1 (IRVKN)
ರಾಜಾಧಿರಾಜನಾದ ಯೆಹೋವನ ಆಗಮನ
1ಪೂರ್ವ 16:23-33 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
ಕೀರ್ತನೆಗಳು 96 : 2 (IRVKN)
ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
ಕೀರ್ತನೆಗಳು 96 : 3 (IRVKN)
ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
ಕೀರ್ತನೆಗಳು 96 : 4 (IRVKN)
ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
ಕೀರ್ತನೆಗಳು 96 : 5 (IRVKN)
ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
ಕೀರ್ತನೆಗಳು 96 : 6 (IRVKN)
ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
ಕೀರ್ತನೆಗಳು 96 : 7 (IRVKN)
ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
ಕೀರ್ತನೆಗಳು 96 : 8 (IRVKN)
ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
ಕೀರ್ತನೆಗಳು 96 : 9 (IRVKN)
ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
ಕೀರ್ತನೆಗಳು 96 : 10 (IRVKN)
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
ಕೀರ್ತನೆಗಳು 96 : 11 (IRVKN)
ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
ಕೀರ್ತನೆಗಳು 96 : 12 (IRVKN)
ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
ಕೀರ್ತನೆಗಳು 96 : 13 (IRVKN)
ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
❮
❯
1
2
3
4
5
6
7
8
9
10
11
12
13