ಕೀರ್ತನೆಗಳು 97 : 1 (IRVKN)
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
ಕೀರ್ತನೆಗಳು 97 : 2 (IRVKN)
ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ* ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ. .
ಕೀರ್ತನೆಗಳು 97 : 3 (IRVKN)
ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
ಕೀರ್ತನೆಗಳು 97 : 4 (IRVKN)
ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
ಕೀರ್ತನೆಗಳು 97 : 5 (IRVKN)
ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
ಕೀರ್ತನೆಗಳು 97 : 6 (IRVKN)
ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
ಕೀರ್ತನೆಗಳು 97 : 7 (IRVKN)
ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; † ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ. ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
ಕೀರ್ತನೆಗಳು 97 : 8 (IRVKN)
ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
ಕೀರ್ತನೆಗಳು 97 : 9 (IRVKN)
ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
ಕೀರ್ತನೆಗಳು 97 : 10 (IRVKN)
‡ ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಕೀರ್ತನೆಗಳು 97 : 11 (IRVKN)
ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು§ ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. , ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
ಕೀರ್ತನೆಗಳು 97 : 12 (IRVKN)
ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.* ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.
❮
❯
1
2
3
4
5
6
7
8
9
10
11
12