ಕೀರ್ತನೆಗಳು 98 : 1 (IRVKN)
ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು
ಕೀರ್ತ 67 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
ಕೀರ್ತನೆಗಳು 98 : 2 (IRVKN)
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ಕೀರ್ತನೆಗಳು 98 : 3 (IRVKN)
ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
ಕೀರ್ತನೆಗಳು 98 : 4 (IRVKN)
ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
ಕೀರ್ತನೆಗಳು 98 : 5 (IRVKN)
ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
ಕೀರ್ತನೆಗಳು 98 : 6 (IRVKN)
ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
ಕೀರ್ತನೆಗಳು 98 : 7 (IRVKN)
ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
ಕೀರ್ತನೆಗಳು 98 : 8 (IRVKN)
ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
ಕೀರ್ತನೆಗಳು 98 : 9 (IRVKN)
ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
❮
❯