ಕೀರ್ತನೆಗಳು 99 : 1 (IRVKN)
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಜನಾಂಗಗಳು ನಡುಗಲಿ. [QBR] ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; [QBR] ಭೂಮಿಯು ಕಂಪಿಸಲಿ. [QBR]
ಕೀರ್ತನೆಗಳು 99 : 2 (IRVKN)
ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; [QBR] ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. [QBR]
ಕೀರ್ತನೆಗಳು 99 : 3 (IRVKN)
ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; [QBR] ಆತನು ಪರಿಶುದ್ಧನು. [QBR]
ಕೀರ್ತನೆಗಳು 99 : 4 (IRVKN)
ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ [* ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ] ; [QBR] ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, [QBR] ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. [QBR]
ಕೀರ್ತನೆಗಳು 99 : 5 (IRVKN)
ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. [QBR] ಆತನು ಪರಿಶುದ್ಧನು. [QBR]
ಕೀರ್ತನೆಗಳು 99 : 6 (IRVKN)
ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, [QBR] ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, [QBR] ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. [QBR]
ಕೀರ್ತನೆಗಳು 99 : 7 (IRVKN)
ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; [QBR] ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. [QBR]
ಕೀರ್ತನೆಗಳು 99 : 8 (IRVKN)
ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. [QBR] ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, [QBR] ಕ್ಷಮಿಸುವ ದೇವರಾಗಿದ್ದಿ. [QBR]
ಕೀರ್ತನೆಗಳು 99 : 9 (IRVKN)
ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. [QBR] ನಮ್ಮ ಯೆಹೋವ ದೇವರು ಪರಿಶುದ್ಧನು. [PE]
❮
❯