ಪ್ರಕಟನೆ 10 : 1 (IRVKN)
ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. * ಯೆಹೆ. 1:28: ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. † ಪ್ರಕ 1:16; ಮತ್ತಾ 17:2: ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ‡ ಪ್ರಕ 1:15: ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
ಪ್ರಕಟನೆ 10 : 2 (IRVKN)
§ ಪ್ರಕ 10:8-10: ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,
ಪ್ರಕಟನೆ 10 : 3 (IRVKN)
* ಯೋವೇ. 3:16; ಆಮೋ. 1:2: ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.
ಪ್ರಕಟನೆ 10 : 4 (IRVKN)
ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ † ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10: ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
ಪ್ರಕಟನೆ 10 : 5 (IRVKN)
ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ‡ ಆದಿ 14:22: ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
ಪ್ರಕಟನೆ 10 : 6 (IRVKN)
§ ಪ್ರಕ 4:11: ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, * ಪ್ರಕ 4:9: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ † ದಾನಿ. 12:7: ಆಣೆಯಿಟ್ಟು, ‡ ಪ್ರಕ 12:12; 16:17; 21:6; ದಾನಿ. 12:7: “ಇನ್ನು ತಡಮಾಡದೆ,
ಪ್ರಕಟನೆ 10 : 7 (IRVKN)
§ ಪ್ರಕ 11:15: ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು * ಆಮೋ. 3:7: ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
ಪ್ರಕಟನೆ 10 : 9 (IRVKN)
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, † ಯೆಹೆ. 2:4, 3:3; ಯೆರೆ 15:16: ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
ಪ್ರಕಟನೆ 10 : 10 (IRVKN)
ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.
ಪ್ರಕಟನೆ 10 : 11 (IRVKN)
ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
❮
❯
1
2
3
4
5
6
7
8
9
10
11