ಪ್ರಕಟನೆ 12 : 1 (IRVKN)
ಘಟಸರ್ಪ ಮತ್ತು ಸ್ತ್ರೀ ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು * ಕೀರ್ತ 104:2; ಪರಮ. 6:10: ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
ಪ್ರಕಟನೆ 12 : 2 (IRVKN)
ಯೆಶಾ 66:7-10; ಮೀಕ. 4:10; ಮತ್ತಾ 24:8; ಯೋಹಾ 16:21: ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.
ಪ್ರಕಟನೆ 12 : 3 (IRVKN)
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಯೆಶಾ 27:1; ಪ್ರಕ 17:3: ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ § ಪ್ರಕ 13:1; 17:9, 12: ಏಳು ತಲೆಗಳೂ * ದಾನಿ. 7:7: ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ † ಪ್ರಕ 19:12: ಏಳು ಕಿರೀಟಗಳು ಇದ್ದವು.
ಪ್ರಕಟನೆ 12 : 4 (IRVKN)
ಅದು ತನ್ನ ಬಾಲದಿಂದ ಪ್ರಕ 8:7: ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು § ದಾನಿ. 8:10: ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ * ಮತ್ತಾ 2:16: ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
ಪ್ರಕಟನೆ 12 : 5 (IRVKN)
ಆಕೆ ಮತ್ತಾ 2:6; ಪ್ರಕ 2:27: ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
ಪ್ರಕಟನೆ 12 : 6 (IRVKN)
ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಪ್ರಕ 11:2, 3; 13:5: ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.
ಪ್ರಕಟನೆ 12 : 7 (IRVKN)
ಪರಲೋಕದಲ್ಲಿ ಯುದ್ಧ ನಡೆಯಿತು. § ಯೂದ. 9: ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ * ಮತ್ತಾ 25:41; 2 ಪೇತ್ರ. 2:4; ಯೂದ 6: ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
ಪ್ರಕಟನೆ 12 : 8 (IRVKN)
ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
ಪ್ರಕಟನೆ 12 : 9 (IRVKN)
ಪ್ರಕ 20:3, 10; 13:14; ಯೋಹಾ 8:44: ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ‡ ಆದಿ 3:1; ಪ್ರಕ 20:2: ಪುರಾತನ ಸರ್ಪವನ್ನು § ಲೂಕ 10:18; ಯೊಹಾ. 12:31: ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಪ್ರಕಟನೆ 12 : 10 (IRVKN)
ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ * ಅಥವಾ ಜಯವೂ. ಪ್ರಕ 7:10; 19:1: ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ † ಯೋಬ. 1:9; 2:5; ಜೆಕ. 3:1: ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
ಪ್ರಕಟನೆ 12 : 11 (IRVKN)
ಅವರು ಪ್ರಕ 2:10: ಮರಣದವರೆಗೆ ತಮ್ಮ § ಲೂಕ 14:26; ಯೋಹಾ 12:25: ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ * ಪ್ರಕ 15:2; ಯೋಹಾ 16:33; ರೋಮಾ. 8:37; 16:20: ಅವನನ್ನು ಜಯಿಸಿದರು.
ಪ್ರಕಟನೆ 12 : 12 (IRVKN)
ಆದ್ದರಿಂದ ಕೀರ್ತ 96:11; ಯೆಶಾ 44:23; 49:13; ಪ್ರಕ 18:20: ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ‡ ಪ್ರಕ 8:13: ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು § ಮತ್ತಾ 8:29; ಪ್ರಕ 10:6: ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.
ಪ್ರಕಟನೆ 12 : 13 (IRVKN)
ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, * ವ. 5: ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
ಪ್ರಕಟನೆ 12 : 14 (IRVKN)
ಆದರೆ ಆ ಸ್ತ್ರೀಯು ವ. 6: ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ‡ ವಿಮೋ 19:4: ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
ಪ್ರಕಟನೆ 12 : 15 (IRVKN)
ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.
ಪ್ರಕಟನೆ 12 : 16 (IRVKN)
ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.
ಪ್ರಕಟನೆ 12 : 17 (IRVKN)
ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, § ಆದಿ 3:15: ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, * ಪ್ರಕ 14:12; 1 ಯೋಹಾ 2:3: ದೇವರ ಆಜ್ಞೆಗಳನ್ನು ಕೈಗೊಂಡು ನಡೆದು † ಪ್ರಕ 1:2; 6:9; 19:10: ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ‡ ಪ್ರಕ 11:7; 13:7: ಯುದ್ಧಮಾಡುವುದಕ್ಕೆ ಹೊರಟು, (18) ಸಮುದ್ರ ತೀರದ ಮರಳಿನ ಮೇಲೆ ನಿಂತನು.

1 2 3 4 5 6 7 8 9 10 11 12 13 14 15 16 17