ಪ್ರಕಟನೆ 13 : 1 (IRVKN)
ಎರಡು ಮೃಗಗಳು * ದಾನಿ. 7:2-8: ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. † ಪ್ರಕ 12:3: ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ ‡ ಪ್ರಕ 17:3: ದೇವದೂಷಣೆಯ ನಾಮಗಳೂ ಇದ್ದವು.
ಪ್ರಕಟನೆ 13 : 2 (IRVKN)
ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. § ಪ್ರಕ 13:4, 11; ಲೂಕ 4:6: ಅದಕ್ಕೆ ಘಟಸರ್ಪನು ಶಕ್ತಿಯನ್ನೂ, * ಪ್ರಕ 16:10: ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
ಪ್ರಕಟನೆ 13 : 3 (IRVKN)
ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, † ಪ್ರಕ 17:8: ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
ಪ್ರಕಟನೆ 13 : 4 (IRVKN)
ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, ‡ ಪ್ರಕ 18:18: “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
ಪ್ರಕಟನೆ 13 : 5 (IRVKN)
§ ದಾನಿ. 7:8, 11, 20; 11:36; 2 ಥೆಸ. 2:4: ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು * ಪ್ರಕ 11:2; 12:6: ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
ಪ್ರಕಟನೆ 13 : 6 (IRVKN)
ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
ಪ್ರಕಟನೆ 13 : 7 (IRVKN)
† ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ಇದಲ್ಲದೆ ದೇವಜನರ ಮೇಲೆ ‡ ದಾನಿ. 7:21; ಪ್ರಕ 11:7; 12:17: ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಪ್ರಕಟನೆ 13 : 8 (IRVKN)
§ ಅ. ಕೃ. 2:23; 1 ಪೇತ್ರ. 1:19, 20: ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ * ಪ್ರಕ 3:5: ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ † ಪ್ರಕ 3:10: ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.
ಪ್ರಕಟನೆ 13 : 9 (IRVKN)
‡ ಪ್ರಕ 2:7: ಕಿವಿಯುಳ್ಳವನು ಕೇಳಲಿ,
ಪ್ರಕಟನೆ 13 : 10 (IRVKN)
§ ಯೆಶಾ 33:1; ಯೆರೆ 15:2; 43:11: ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, * ಆದಿ 9:6; ಮತ್ತಾ 26:52: ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. † ಪ್ರಕ 14:12: ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.
ಪ್ರಕಟನೆ 13 : 11 (IRVKN)
‡ ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20: ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ § ಮೂಲ. ಕುರಿಮರಿಗಿರುವಂತೆ. ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
ಪ್ರಕಟನೆ 13 : 12 (IRVKN)
ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ * ವ. 9: ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
ಪ್ರಕಟನೆ 13 : 13 (IRVKN)
ಇದು ಜನರ ಮುಂದೆ † ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54: ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
ಪ್ರಕಟನೆ 13 : 14 (IRVKN)
ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ‡ ಪ್ರಕ 12:9: ಮರಳುಗೊಳಿಸಿತ್ತು. ಅವರಿಗೆ, § ಪ್ರಕ 13:3, 12: ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
ಪ್ರಕಟನೆ 13 : 15 (IRVKN)
ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, * ಪ್ರಕ 14:9, 11; 16:2; 19:20; 20:4: ತನ್ನನ್ನು ಆರಾಧಿಸದವರೆಲ್ಲರಿಗೂ † ಪ್ರಕ 16:6: ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
ಪ್ರಕಟನೆ 13 : 16 (IRVKN)
ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ‡ ಪ್ರಕ 7:3; ಗಲಾ. 6:17: ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
ಪ್ರಕಟನೆ 13 : 17 (IRVKN)
ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ § ಪ್ರಕ 14:11: ಮೊದಲನೆಯ ಮೃಗದ ಹೆಸರು ಅಥವಾ * ಪ್ರಕ 15:2: ಅದರ ಹೆಸರನ್ನು ಸೂಚಿಸುವ ಸಂಖ್ಯೆ.
ಪ್ರಕಟನೆ 13 : 18 (IRVKN)
† ಪ್ರಕ 17, 9: ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666
❮
❯
1
2
3
4
5
6
7
8
9
10
11
12
13
14
15
16
17
18