ಪ್ರಕಟನೆ 18 : 1 (IRVKN)
ಬಾಬೆಲಿನ ಪತನವು ಇದಾದ ನಂತರ ಮಹಾ ಅಧಿಕಾರವುಳ್ಳ * ಪ್ರಕ 17 1, 7: ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. † ಯೆಹೆ. 43:2: ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.
ಪ್ರಕಟನೆ 18 : 2 (IRVKN)
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ‡ ಯೆಶಾ 21:9; ಪ್ರಕ 14:8: ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು § ಯೆರೆ 50:39; 51:37; ಚೆಫ. 2:14,15: ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, * ಯೆಶಾ 14:23: ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.
ಪ್ರಕಟನೆ 18 : 3 (IRVKN)
ಎಲ್ಲಾ ದೇಶಗಳವರೂ † ಪ್ರಕ 14:8: ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ‡ ಅಥವಾ, ಅವಳ ದುಷ್ಕರ್ಮವನ್ನು ನೋಡಿರಿ. ಪ್ರಕ 17:2: ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ § ಪ್ರಕ 18:11, 15: ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
ಪ್ರಕಟನೆ 18 : 4 (IRVKN)
ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, * ಯೆಶಾ 48:20; ಯೆರೆ 51:6, 45; 2 ಕೊರಿ 6:17: ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.
ಪ್ರಕಟನೆ 18 : 5 (IRVKN)
† ಎಜ್ರ. 9:6; ಯೋನ. 1:2: ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ‡ ಪ್ರಕ 16:19: ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.
ಪ್ರಕಟನೆ 18 : 6 (IRVKN)
§ ಕೀರ್ತ 48:20; ಯೆರೆ 51:6, 45; 2 ಕೊರಿ 6 17: ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ * ಯೆರೆ 16:18: ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ † ಪ್ರಕ 14:10; 16:19; 17:4: ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.
ಪ್ರಕಟನೆ 18 : 7 (IRVKN)
‡ ಯೆಹೆ. 28:2-8: ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, § ಯೆಶಾ 47:7, 8; ಚೆಫ. 2:15: ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.
ಪ್ರಕಟನೆ 18 : 8 (IRVKN)
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು * ಯೆಶಾ 47 9; ಪ್ರಕ 18:10: ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ [† ಯೆರೆ 50 34: ]ಕರ್ತನಾದ ದೇವರು ಶಕ್ತನಾಗಿರುವುದರಿಂದ ‡ ಪ್ರಕ 17:16: ಅವಳು ಬೆಂಕಿಯಿಂದ ನಾಶವಾಗುವಳು.
ಪ್ರಕಟನೆ 18 : 10 (IRVKN)
(9-10)“§ ಪ್ರಕ 17:2; 18:3: ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ * ಪ್ರಕ 18:18; 19:3; ಆದಿ 19:28: ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ † ಪ್ರಕ 18:15, 17: ದೂರದಲ್ಲಿ ನಿಂತು ಅಳುತ್ತಾ [‡ ಯೆರೆ 50 46: ]ಗೋಳಾಡುತ್ತಾ, ‘ಅಯ್ಯೋ ಅಯ್ಯೋ § ಪ್ರಕ 14:8: ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು * ಪ್ರಕ 18:17, 19; ವ. 8: ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.
ಪ್ರಕಟನೆ 18 : 11 (IRVKN)
“ಇದಲ್ಲದೆ † ಪ್ರಕ 18:3, 15; ಯೆಹೆ. 27:36: ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,
ಪ್ರಕಟನೆ 18 : 12 (IRVKN)
ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ
ಪ್ರಕಟನೆ 18 : 13 (IRVKN)
ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.
ಪ್ರಕಟನೆ 18 : 14 (IRVKN)
‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’
ಪ್ರಕಟನೆ 18 : 15 (IRVKN)
‡ ಪ್ರಕ 18:3, 11: ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು § ವ. 10: ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,
ಪ್ರಕಟನೆ 18 : 16 (IRVKN)
‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು * ಪ್ರಕ 17:4: ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’
ಪ್ರಕಟನೆ 18 : 17 (IRVKN)
ಅಷ್ಟು ಐಶ್ವರ್ಯವು † ಪ್ರಕ 18:10, 19: ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ ಎಂದು ಪರಿತಪಿಸುವರು. ಇದಲ್ಲದೆ ‡ ಯೆಹೆ. 27:28, 29: ಹಡಗುಗಳ ಯಜಮಾನರೂ, ಪಯಣಿಗರೂ, ನಾವಿಕರೂ ಸಮುದ್ರದಿಂದ ತಮ್ಮ ಜೀವನವನ್ನುಮಾಡುತ್ತಿದ್ದವರೆಲ್ಲರೂ ದೂರದಲ್ಲಿ ನಿಂತು,
ಪ್ರಕಟನೆ 18 : 18 (IRVKN)
§ ವ. 9: ಅವಳ ದಹನದ ಹೊಗೆಯನ್ನು ನೋಡಿ * ಯೆಹೆ. 27:30, 32; ಪ್ರಕ 13:4: ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.
ಪ್ರಕಟನೆ 18 : 19 (IRVKN)
ಅನಂತರ ಅವರು † ಯೆಹೋ. 7:6; ಯೋಬ. 2:12: ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು, ‘ಅಯ್ಯೋ ಅಯ್ಯೋ ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ‡ ಪ್ರಕ 18:3, 15: ಅವಳ ಅಮೂಲ್ಯ ದ್ರವ್ಯಗಳಿಂದಲೇ ಐಶ್ವರ್ಯವಂತರಾದರಲ್ಲಾ, § ಪ್ರಕ 18:10, 17: ಇವಳು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ’ ” ಎಂದು ಗೋಳಾಡುತ್ತಾ ದುಃಖಿಸುವರು.
ಪ್ರಕಟನೆ 18 : 20 (IRVKN)
* ಧರ್ಮೋ 32:43; ಯೆರೆ 51:48; ಪ್ರಕ 12:12: ಪರಲೋಕವೇ, ದೇವಜನರೇ, ಅಪೊಸ್ತಲರೇ, [† ಲೂಕ 11:49, 50 ]ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ‡ ಪ್ರಕ 19:2: ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.
ಪ್ರಕಟನೆ 18 : 21 (IRVKN)
ಆಗ § ಪ್ರಕ 5:2; 10:1: ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ * ಯೆರೆ 51:63, 64: ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, † ವ. 10: “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.
ಪ್ರಕಟನೆ 18 : 22 (IRVKN)
ಬಾಬೆಲೇ ನಿನ್ನಲ್ಲಿ ‡ ಯೆಶಾ 14:11; 24:8; ಯೆಹೆ. 26:13: ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. § ಪ್ರಸಂಗಿ. 12:4; ಯೆರೆ 25:10: ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.
ಪ್ರಕಟನೆ 18 : 23 (IRVKN)
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. * ಯೆರೆ 7:34; 16:9; 33:11: ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. † ಯೆಶಾ 23:8: ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ‡ ನಹೂ. 3:4: ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.
ಪ್ರಕಟನೆ 18 : 24 (IRVKN)
“§ ಪ್ರಕ 17:6; ಮತ್ತಾ 23:35, 36: ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ * ಮೂಲ: ಅವಳಲ್ಲಿ. ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24