ಪ್ರಕಟನೆ 8 : 1 (IRVKN)
ಏಳನೆಯ ಮುದ್ರೆ * ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ಆತನು † ಪ್ರಕ 5:1; 6:1: ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
ಪ್ರಕಟನೆ 8 : 2 (IRVKN)
ಆಗ ‡ ಲೂಕ 1:19: ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.
ಪ್ರಕಟನೆ 8 : 3 (IRVKN)
ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು [§ ವಿಮೋ 30 1, 3; ಪ್ರಕ 9:13: ]ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ * ಪ್ರಕ 5:8: ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
ಪ್ರಕಟನೆ 8 : 4 (IRVKN)
ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು † ಕೀರ್ತ 141:2: ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
ಪ್ರಕಟನೆ 8 : 5 (IRVKN)
ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ‡ ಯಾಜ 16:12: ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ § ಪ್ರಕ 4:5: ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.
ಪ್ರಕಟನೆ 8 : 7 (IRVKN)
ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.
ಪ್ರಕಟನೆ 8 : 8 (IRVKN)
ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು [* ಯೋವೇ. 2: 30 ]ರಕ್ತ ಮಿಶ್ರಿತವಾದ † ವಿಮೋ 9:23, 24; ಕೀರ್ತ 18:12, 13; ಯೆರೆ 38:22: ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ‡ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. § ಯೆಶಾ 2:13; ಪ್ರಕ 9:4: ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ * ಯೆರೆ 51:25; ಮಾರ್ಕ 11:23: ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ † ಪ್ರಕ 11:6; ವಿಮೋ 7:17, 19 ರಕ್ತವಾಯಿತು.
ಪ್ರಕಟನೆ 8 : 9 (IRVKN)
‡ ಪ್ರಕ 16:3; ವಿಮೋ 7:20, 21: ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು § ಯೆಶಾ 2:16: ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.
ಪ್ರಕಟನೆ 8 : 10 (IRVKN)
ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ * ಪ್ರಕ 9:1; ಯೆಶಾ 14:12: ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ † ಪ್ರಕ 14:7; 16:4: ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
ಪ್ರಕಟನೆ 8 : 11 (IRVKN)
ಆ ನಕ್ಷತ್ರದ ಹೆಸರು ‡ ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ § ಧರ್ಮೋ 29:18; ಯೆರೆ 9:15; 3:15: ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ * ವಿಮೋ 15:23: ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.
ಪ್ರಕಟನೆ 8 : 13 (IRVKN)
ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ [† ವಿಮೋ 10:21-23; ಯೆಶಾ 13:10; 30 26; ಪ್ರಕ 8:10: ]ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ‡ ಪ್ರಕ 9:12; 11:14: ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
❮
❯
1
2
3
4
5
6
7
8
9
10
11
12
13