ರೋಮಾಪುರದವರಿಗೆ 1 : 1 (IRVKN)
ಪೀಠಿಕೆ ಯೇಸು ಕ್ರಿಸ್ತನ ದಾಸನೂ, * 1 ಕೊರಿ 1:1; 9:1; 2 ಕೊರಿ 1:1 ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
ರೋಮಾಪುರದವರಿಗೆ 1 : 2 (IRVKN)
ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;
ರೋಮಾಪುರದವರಿಗೆ 1 : 3 (IRVKN)
1 ಕೊರಿ 1:3, 2 ಕೊರಿ 1:2 ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ರೋಮಾಪುರದವರಿಗೆ 1 : 4 (IRVKN)
ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.
ರೋಮಾಪುರದವರಿಗೆ 1 : 5 (IRVKN)
ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ಅ. ಕೃ. 13:33 ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.
ರೋಮಾಪುರದವರಿಗೆ 1 : 6 (IRVKN)
ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,
ರೋಮಾಪುರದವರಿಗೆ 1 : 7 (IRVKN)
ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ § ರೋಮಾ. 12:3, 15:15, ಎಫೆ 3:2-3 ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
ರೋಮಾಪುರದವರಿಗೆ 1 : 8 (IRVKN)
ಮೊದಲು * ರೋಮಾ. 16:19 ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ † 1 ಕೊರಿ 1:4, ಎಫೆ 1:16, ಫಿಲಿ. 1:3-4 ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.
ರೋಮಾಪುರದವರಿಗೆ 1 : 9 (IRVKN)
ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.
ರೋಮಾಪುರದವರಿಗೆ 1 : 10 (IRVKN)
ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
ರೋಮಾಪುರದವರಿಗೆ 1 : 11 (IRVKN)
(11-12)ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ರೋಮಾ. 15:22-23 ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ರೋಮಾಪುರದವರಿಗೆ 1 : 12 (IRVKN)
ರೋಮಾಪುರದವರಿಗೆ 1 : 13 (IRVKN)
ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.
ರೋಮಾಪುರದವರಿಗೆ 1 : 14 (IRVKN)
ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ § 1 ಕೊರಿ 9:16 ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ.
ರೋಮಾಪುರದವರಿಗೆ 1 : 15 (IRVKN)
ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.
ರೋಮಾಪುರದವರಿಗೆ 1 : 16 (IRVKN)
ಸುವಾರ್ತೆಯ ಶಕ್ತಿ * ಕೀರ್ತ 40:9-10 ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು † 1 ಕೊರಿ 18:18,24: ಮೊದಲು ಯೆಹೂದ್ಯರಿಗೆ ಆ ಮೇಲೆ ‡ ಅಂದರೆ ಅನ್ಯಜನರಿಗೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ರೋಮಾಪುರದವರಿಗೆ 1 : 17 (IRVKN)
ಹೇಗೆಂದರೆ § ದೇವರ ನೀತಿ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. * ಹಬ 2:4, ಗಲಾ. 3:11, ಇಬ್ರಿ. 10:38 “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ರೋಮಾಪುರದವರಿಗೆ 1 : 18 (IRVKN)
ಎಲ್ಲಾ ಮನುಷ್ಯರು ದೇವರ ಸನ್ನಿಧಿಯಲ್ಲಿ ಅಪರಾಧಿಗಳು ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ಎಫೆ 5:6, ಕೊಲೊ 3:6 ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
ರೋಮಾಪುರದವರಿಗೆ 1 : 19 (IRVKN)
ಯಾಕೆಂದರೆ ರೋಮಾ. 2:14-15 ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
ರೋಮಾಪುರದವರಿಗೆ 1 : 20 (IRVKN)
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು § ಕೀರ್ತ 19:1-6 ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
ರೋಮಾಪುರದವರಿಗೆ 1 : 21 (IRVKN)
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. * ಎಫೆ 4:17-18 ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ರೋಮಾಪುರದವರಿಗೆ 1 : 22 (IRVKN)
1 ಕೊರಿ 1:20 ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
ರೋಮಾಪುರದವರಿಗೆ 1 : 23 (IRVKN)
1 ತಿಮೊ. 1:17 ಲಯವಿಲ್ಲದ § ಕೀರ್ತ 106:20, ಯೆರೆ 2:11, ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
ರೋಮಾಪುರದವರಿಗೆ 1 : 24 (IRVKN)
ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು * ರೋಮಾ. 1:26,28 ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
ರೋಮಾಪುರದವರಿಗೆ 1 : 25 (IRVKN)
ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ರೋಮಾ. 9:5 ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
ರೋಮಾಪುರದವರಿಗೆ 1 : 26 (IRVKN)
ಅವರು ಇಂಥದ್ದನ್ನು ಮಾಡಿದ್ದರಿಂದ ರೋಮಾ. 1:24,28 ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
ರೋಮಾಪುರದವರಿಗೆ 1 : 27 (IRVKN)
ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
ರೋಮಾಪುರದವರಿಗೆ 1 : 28 (IRVKN)
ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ § ರೋಮಾ. 1:24,26 ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
ರೋಮಾಪುರದವರಿಗೆ 1 : 29 (IRVKN)
ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
ರೋಮಾಪುರದವರಿಗೆ 1 : 30 (IRVKN)
ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,
ರೋಮಾಪುರದವರಿಗೆ 1 : 31 (IRVKN)
ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.
ರೋಮಾಪುರದವರಿಗೆ 1 : 32 (IRVKN)
ಇಂಥವುಗಳನ್ನು ನಡಿಸುವವರು * ರೋಮಾ. 6:21 ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32