ರೋಮಾಪುರದವರಿಗೆ 10 : 1 (IRVKN)
ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.
ರೋಮಾಪುರದವರಿಗೆ 10 : 2 (IRVKN)
[* ಅ. ಕೃ. 21:20] ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
ರೋಮಾಪುರದವರಿಗೆ 10 : 3 (IRVKN)
[† ರೋಮಾ. 1:17] ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ರೋಮಾಪುರದವರಿಗೆ 10 : 4 (IRVKN)
ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
ರೋಮಾಪುರದವರಿಗೆ 10 : 5 (IRVKN)
ಧರ್ಮಶಾಸ್ತ್ರದ ನೀತಿಯನುಸಾರ, [‡ ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12] “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
ರೋಮಾಪುರದವರಿಗೆ 10 : 6 (IRVKN)
ಆದರೆ [§ ರೋಮಾ. 9:30] ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. [* ಧರ್ಮೋ 30:12-14] “ ‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
ರೋಮಾಪುರದವರಿಗೆ 10 : 7 (IRVKN)
ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’ ” ಆದರೆ ಅದು ಏನನ್ನು ಹೇಳುತ್ತದೆ.
ರೋಮಾಪುರದವರಿಗೆ 10 : 8 (IRVKN)
“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ರೋಮಾಪುರದವರಿಗೆ 10 : 9 (IRVKN)
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು [† ಮತ್ತಾ 10:32; ಲೂಕ 12:8] ಬಾಯಿಂದ ಅರಿಕೆಮಾಡಿಕೊಂಡು [‡ ಅ. ಕೃ. 2:24; 1 ಪೇತ್ರ 1:21] ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
ರೋಮಾಪುರದವರಿಗೆ 10 : 10 (IRVKN)
ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
ರೋಮಾಪುರದವರಿಗೆ 10 : 11 (IRVKN)
[§ ಯೆಶಾ 28:16; ರೋಮಾ. 9:33] “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
ರೋಮಾಪುರದವರಿಗೆ 10 : 12 (IRVKN)
ಈ ವಿಷಯದಲ್ಲಿ [* ರೋಮಾ. 3:22,29] ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. [† ಅ. ಕೃ. 10:36] ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
ರೋಮಾಪುರದವರಿಗೆ 10 : 13 (IRVKN)
ಆದ್ದರಿಂದ [‡ ಯೋವೇ. 2:32; ಅ. ಕೃ. 2:21] ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ. [PS]
ರೋಮಾಪುರದವರಿಗೆ 10 : 14 (IRVKN)
{ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ} [PS] ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
ರೋಮಾಪುರದವರಿಗೆ 10 : 15 (IRVKN)
ಇದಕ್ಕೆ ಸರಿಯಾಗಿ [§ ಯೆಶಾ 52:7; ನಹೂ. 1:15] “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
ರೋಮಾಪುರದವರಿಗೆ 10 : 16 (IRVKN)
[* ಇಬ್ರಿ. 4:2] ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, [† ಯೆಶಾ 53:1; ಯೋಹಾ 12:38] “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
ರೋಮಾಪುರದವರಿಗೆ 10 : 17 (IRVKN)
ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ರೋಮಾಪುರದವರಿಗೆ 10 : 18 (IRVKN)
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. [‡ ಕೀರ್ತ 19:4] “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
ರೋಮಾಪುರದವರಿಗೆ 10 : 19 (IRVKN)
ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, [§ ಧರ್ಮೋ 32:21] “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
ರೋಮಾಪುರದವರಿಗೆ 10 : 20 (IRVKN)
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, [* ಯೆಶಾ 65:1] “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
ರೋಮಾಪುರದವರಿಗೆ 10 : 21 (IRVKN)
ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, [† ಯೆಶಾ 65:2] “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: