ರೋಮಾಪುರದವರಿಗೆ 12 : 1 (IRVKN)
{ದೇವಜನರು ನಡೆದುಕೊಳ್ಳಬೇಕಾದ ರೀತಿ} [PS] ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, [* ರೋಮಾ. 6:13,16,19; 1 ಕೊರಿ 6:20] ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ [† ಪವಿತ್ರವಾಗಿಯೂ] ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ರೋಮಾಪುರದವರಿಗೆ 12 : 2 (IRVKN)
[‡ 1 ಪೇತ್ರ 1:14; 1 ಯೋಹಾ 2:15] ಇಹಲೋಕದ ನಡವಳಿಕೆಯನ್ನು ಅನುಸರಿಸದೆ [§ ತೀತ 3:5; ಎಫೆ 4:23; ಕೊಲೊ 3:10] ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ [* 1 ಥೆಸ. 4:3] ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. [PE][PS]
ರೋಮಾಪುರದವರಿಗೆ 12 : 3 (IRVKN)
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ [† ರೋಮಾ. 11:20; 12:16] ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ [‡ 1 ಕೊರಿ 7:17; ಎಫೆ 4:7] ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
ರೋಮಾಪುರದವರಿಗೆ 12 : 4 (IRVKN)
ಯಾಕೆಂದರೆ [§ 1 ಕೊರಿ 12:12-14; ಎಫೆ 4:4,16] ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
ರೋಮಾಪುರದವರಿಗೆ 12 : 5 (IRVKN)
ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ [* 1 ಕೊರಿ 12:20 ಎಫೆ 4:4,12] ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
ರೋಮಾಪುರದವರಿಗೆ 12 : 6 (IRVKN)
[† 1 ಕೊರಿ 12:4,7-11; 7:7; 1 ಪೇತ್ರ 4:10,11] ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. [‡ 1 ಕೊರಿ 12:10] ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
ರೋಮಾಪುರದವರಿಗೆ 12 : 7 (IRVKN)
[§ ಅ. ಕೃ. 6:1] ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
ರೋಮಾಪುರದವರಿಗೆ 12 : 8 (IRVKN)
ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. [* 2 ಕೊರಿ 8:2; 9:7,11,13] ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. [† 1 ತಿಮೊ. 5:17] ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. [PE][PS]
ರೋಮಾಪುರದವರಿಗೆ 12 : 9 (IRVKN)
[‡ 2 ಕೊರಿ 6:6; 1 ತಿಮೊ. 1:5; 1 ಪೇತ್ರ 1:22] ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. [§ ಕೀರ್ತ 97:10; ಅಮೋ. 5:15; 1 ಥೆಸ. 5:21,22] ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
ರೋಮಾಪುರದವರಿಗೆ 12 : 10 (IRVKN)
[* ಇಬ್ರಿ. 13:1] ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. [† ರೋಮಾ. 13:7; ಫಿಲಿ. 2:3] ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
ರೋಮಾಪುರದವರಿಗೆ 12 : 11 (IRVKN)
ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ [‡ ಅ. ಕೃ. 18:25] ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
ರೋಮಾಪುರದವರಿಗೆ 12 : 12 (IRVKN)
[§ ರೋಮಾ. 5:2] ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ರೋಮಾಪುರದವರಿಗೆ 12 : 13 (IRVKN)
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
ರೋಮಾಪುರದವರಿಗೆ 12 : 14 (IRVKN)
[* ಮತ್ತಾ 5:44; 1 ಪೇತ್ರ 3:9] ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
ರೋಮಾಪುರದವರಿಗೆ 12 : 15 (IRVKN)
[† 1 ಕೊರಿ 12:26] ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
ರೋಮಾಪುರದವರಿಗೆ 12 : 16 (IRVKN)
[‡ ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2] ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ [§ ರೋಮಾ. 12:3; ಕೀರ್ತ 131:1; ಯೆರೆ 45:5] ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. [* ರೋಮಾ. 11:25] ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. [PE][PS]
ರೋಮಾಪುರದವರಿಗೆ 12 : 17 (IRVKN)
[† ಜ್ಞಾ. 20:22; ಮತ್ತಾ 5:39; 1 ಥೆಸ. 5:15] ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. [‡ 2 ಕೊರಿ 8:21] ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
ರೋಮಾಪುರದವರಿಗೆ 12 : 18 (IRVKN)
ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ [§ ಮಾರ್ಕ 9:50] ಎಲ್ಲರ ಸಂಗಡ ಸಮಾಧಾನದಿಂದಿರಿ.
ರೋಮಾಪುರದವರಿಗೆ 12 : 19 (IRVKN)
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ [* ಧರ್ಮೋ 32:35; ಇಬ್ರಿ. 10:30] “ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
ರೋಮಾಪುರದವರಿಗೆ 12 : 20 (IRVKN)
ಹಾಗಾದರೆ [† ಜ್ಞಾ. 25:21,22; ಲೂಕ 6:27] “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು” [‡ ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ] .
ರೋಮಾಪುರದವರಿಗೆ 12 : 21 (IRVKN)
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: