ರೋಮಾಪುರದವರಿಗೆ 13 : 1 (IRVKN)
ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ * ತೀತ 3:1, 1 ಪೇತ್ರ. 2:13 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ † ಯೋಹಾ 19:11 ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
ರೋಮಾಪುರದವರಿಗೆ 13 : 2 (IRVKN)
ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
ರೋಮಾಪುರದವರಿಗೆ 13 : 3 (IRVKN)
ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.
ರೋಮಾಪುರದವರಿಗೆ 13 : 4 (IRVKN)
‡ 2 ಪೂರ್ವ 19:6 ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.
ರೋಮಾಪುರದವರಿಗೆ 13 : 5 (IRVKN)
ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು.
ರೋಮಾಪುರದವರಿಗೆ 13 : 6 (IRVKN)
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.
ರೋಮಾಪುರದವರಿಗೆ 13 : 7 (IRVKN)
§ ಮತ್ತಾ, 17:25, ಮಾರ್ಕ 12:17 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ರೋಮಾಪುರದವರಿಗೆ 13 : 8 (IRVKN)
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. [* ರೋಮಾ. 13:10, ಮತ್ತಾ 22:40, ಕೊಲೊ 3: 14 ಯೋಹಾ 13:34 ]ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
ರೋಮಾಪುರದವರಿಗೆ 13 : 9 (IRVKN)
ಹೇಗೆಂದರೆ † ವಿಮೋ 20:13-17, ಮತ್ತಾ 19:18 “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು ‡ ಯಾಜ 19:18 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
ರೋಮಾಪುರದವರಿಗೆ 13 : 10 (IRVKN)
ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. § ರೋಮಾ. 13:18, ಯೋಹಾ 14:15 ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
ರೋಮಾಪುರದವರಿಗೆ 13 : 11 (IRVKN)
[* 1 ಕೊರಿ 15: 34 ಎಫೆ 5:14, 1 ಥೆಸ. 5:6 ]ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. † ಯೆಶಾ 56:1, ಲೂಕ 21:28 ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.
ರೋಮಾಪುರದವರಿಗೆ 13 : 12 (IRVKN)
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ‡ 2 ಕೊರಿ 6:7, ಎಫೆ 6:11-13, 1 ಥೆಸ. 5:8 ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.
ರೋಮಾಪುರದವರಿಗೆ 13 : 13 (IRVKN)
§ ಲೂಕ 21:34, ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ * ಯಾಕೋಬ. 3:14-16 ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ರೋಮಾಪುರದವರಿಗೆ 13 : 14 (IRVKN)
† ಗಲಾ. 5:16 ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ [‡ ಗಲಾ. 21: 34 ಕೊಲೊ 3:10 ]ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
❮
❯
1
2
3
4
5
6
7
8
9
10
11
12
13
14