ರೋಮಾಪುರದವರಿಗೆ 14 : 1 (IRVKN)
ಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿ
1ಕೊರಿ 8-10
* ರೋಮಾ. 15:1; 1 ಕೊರಿ 8:9-11; 9:22 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
ರೋಮಾಪುರದವರಿಗೆ 14 : 2 (IRVKN)
ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
ರೋಮಾಪುರದವರಿಗೆ 14 : 3 (IRVKN)
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
ರೋಮಾಪುರದವರಿಗೆ 14 : 4 (IRVKN)
ಯಾಕೋಬ 4:12 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
ರೋಮಾಪುರದವರಿಗೆ 14 : 5 (IRVKN)
ಗಲಾ. 4:10 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; § ರೋಮಾ. 14:23 ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
ರೋಮಾಪುರದವರಿಗೆ 14 : 6 (IRVKN)
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; * 1 ಕೊರಿ 10:30,31; 1 ತಿಮೊ. 4:3,4 ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
ರೋಮಾಪುರದವರಿಗೆ 14 : 7 (IRVKN)
2 ಕೊರಿ 5:15; ಗಲಾ. 2:20; 1 ಪೇತ್ರ 4:2 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
ರೋಮಾಪುರದವರಿಗೆ 14 : 8 (IRVKN)
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಫಿಲಿ. 1:20 ಬದುಕಿದರೂ ಸತ್ತರೂ ನಾವು ಕರ್ತನವರೇ.
ರೋಮಾಪುರದವರಿಗೆ 14 : 9 (IRVKN)
ಯಾಕೆಂದರೆ § ಅ. ಕೃ. 10:42; ಪ್ರಕ 20:12 ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
ರೋಮಾಪುರದವರಿಗೆ 14 : 10 (IRVKN)
ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? * 2 ಕೊರಿ 5:10 ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
ರೋಮಾಪುರದವರಿಗೆ 14 : 11 (IRVKN)
ಪವಿತ್ರ ಶಾಸ್ತ್ರದಲ್ಲಿ: ಯೆಶಾ 45:23; ಫಿಲಿ. 2:10,11 “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
ರೋಮಾಪುರದವರಿಗೆ 14 : 12 (IRVKN)
ಹೀಗಿರಲಾಗಿ ಮತ್ತಾ 12:36; 16:27; 1 ಪೇತ್ರ 4:5 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
ರೋಮಾಪುರದವರಿಗೆ 14 : 13 (IRVKN)
ಆದಕಾರಣ, ಇನ್ನು ಮೇಲೆ § ಮತ್ತಾ 7:1 ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
ರೋಮಾಪುರದವರಿಗೆ 14 : 14 (IRVKN)
* ರೋಮಾ. 14:2; 20 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ † 1 ಕೊರಿ 8:7,10 ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
ರೋಮಾಪುರದವರಿಗೆ 14 : 15 (IRVKN)
ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ 1 ಕೊರಿ 8:11; ರೋಮಾ. 14:20 ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
ರೋಮಾಪುರದವರಿಗೆ 14 : 16 (IRVKN)
ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
ರೋಮಾಪುರದವರಿಗೆ 14 : 17 (IRVKN)
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ § 1 ಕೊರಿ 6:9 ನೀತಿಯೂ, * ಗಲಾ. 5:22 ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ರೋಮಾಪುರದವರಿಗೆ 14 : 18 (IRVKN)
ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
ರೋಮಾಪುರದವರಿಗೆ 14 : 19 (IRVKN)
ಆದ್ದರಿಂದ ನಾವು 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4 ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.
ರೋಮಾಪುರದವರಿಗೆ 14 : 20 (IRVKN)
ರೋಮಾ. 14:15 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. § ತೀತ 115; ರೋಮಾ. 14:14 ಎಲ್ಲಾ ಪದಾರ್ಥಗಳೂ ಶುದ್ಧವೇ; * 1 ಕೊರಿ 8:9,13 ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
ರೋಮಾಪುರದವರಿಗೆ 14 : 21 (IRVKN)
ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
ರೋಮಾಪುರದವರಿಗೆ 14 : 22 (IRVKN)
ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. 1 ಯೋಹಾ 3:21 ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
ರೋಮಾಪುರದವರಿಗೆ 14 : 23 (IRVKN)
ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ಸಂಶಯಪಟ್ಟು ಮಾಡುವುದೆಲ್ಲಾ ಪಾಪ ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23