ರೋಮಾಪುರದವರಿಗೆ 15 : 1 (IRVKN)
{ನೆರೆಯವನ ಹಿತವನ್ನೂ ಬಯಸುವವನಾಗು} [PS] [* ರೋಮಾ. 14:1] ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
ರೋಮಾಪುರದವರಿಗೆ 15 : 2 (IRVKN)
[† 1 ಕೊರಿ 10:24,33, ಫಿಲಿ. 2:4] ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
ರೋಮಾಪುರದವರಿಗೆ 15 : 3 (IRVKN)
ಯಾಕೆಂದರೆ [‡ ಫಿಲಿ. 2:5,8; ಯೋಹಾ 5:30, 6:38] ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. [§ ಕೀರ್ತ 69:9] “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
ರೋಮಾಪುರದವರಿಗೆ 15 : 4 (IRVKN)
[* ರೋಮಾ. 4:23, 2 ತಿಮೊ. 3:16] ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ರೋಮಾಪುರದವರಿಗೆ 15 : 5 (IRVKN)
ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ [† ರೋಮಾ. 12:16] ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
ರೋಮಾಪುರದವರಿಗೆ 15 : 6 (IRVKN)
ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ [‡ 2 ಕೊರಿ 1:3, ಎಫೆ 1:3, 1 ಪೇತ್ರ. 1:3] ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.
ರೋಮಾಪುರದವರಿಗೆ 15 : 7 (IRVKN)
ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.
ರೋಮಾಪುರದವರಿಗೆ 15 : 8 (IRVKN)
ಯಾಕೆಂದರೆ [§ ಮತ್ತಾ 15:24, ಯೋಹಾ 1:11, ಅ. ಕೃ. 3:26] ಕ್ರಿಸ್ತನು ಪೂರ್ವಿಕರಿಗೆ ಉಂಟಾದ [* ರೋಮಾ. 4:16, 2 ಕೊರಿ 1:20] ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
ರೋಮಾಪುರದವರಿಗೆ 15 : 9 (IRVKN)
[† ರೋಮಾ. 3:29] ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, [‡ 2 ಸಮು 22:50, ಕೀರ್ತ 18:49] “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
ರೋಮಾಪುರದವರಿಗೆ 15 : 10 (IRVKN)
ಇನ್ನೊಮ್ಮೆ, [§ ಧರ್ಮೋ 32:43] “ಅನ್ಯಜನಾಂಗಗಳಿರಾ ದೇವರ ಜನರೊಡನೆ ಉಲ್ಲಾಸಪಡಿರಿ” ಎಂದೂ,
ರೋಮಾಪುರದವರಿಗೆ 15 : 11 (IRVKN)
ಮತ್ತೊಮ್ಮೆ, [* ಕೀರ್ತ 117:1] “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.
ರೋಮಾಪುರದವರಿಗೆ 15 : 12 (IRVKN)
[† ಯೆಶಾ 11:10] ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, [‡ ಯೆಶಾ 11:1, ಪ್ರಕ 5:5, 22:16] “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. [§ ಮತ್ತಾ 12:21] ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
ರೋಮಾಪುರದವರಿಗೆ 15 : 13 (IRVKN)
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ [* ರೋಮಾ. 5:1-2, 14:17] ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. [PS]
ರೋಮಾಪುರದವರಿಗೆ 15 : 14 (IRVKN)
{ಪೌಲನು ತನ್ನ ಹಿಂದಿನ ಕೆಲಸವನ್ನು ಸಂಕ್ಷೇಪವಾಗಿ ತಿಳಿಸಿ ತಾನು ರೋಮಾಪುರಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಸೂಚಿಸಿ ಸಭೆಯವರ ಪ್ರಾರ್ಥನೆ ಕೇಳಿಕೊಳ್ಳುತ್ತಾನೆ} [PS] ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.
ರೋಮಾಪುರದವರಿಗೆ 15 : 15 (IRVKN)
[15-16] ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ [† ರೋಮಾ. 11:13] ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ [‡ ಯೆಶಾ 66:20, ಫಿಲಿ. 2:17] ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
ರೋಮಾಪುರದವರಿಗೆ 15 : 16 (IRVKN)
[NIL]
ರೋಮಾಪುರದವರಿಗೆ 15 : 17 (IRVKN)
ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು
ರೋಮಾಪುರದವರಿಗೆ 15 : 18 (IRVKN)
ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, [§ 2 ಕೊರಿ 12:12] ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.
ರೋಮಾಪುರದವರಿಗೆ 15 : 19 (IRVKN)
ನಾನು ಯೆರೂಸಲೇಮ್ ಮೊದಲುಗೊಂಡು [* ಅ. ಕೃ. 20:1-2] ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.
ರೋಮಾಪುರದವರಿಗೆ 15 : 20 (IRVKN)
[† 2 ಕೊರಿ 10:13, 15:16] ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.
ರೋಮಾಪುರದವರಿಗೆ 15 : 21 (IRVKN)
[‡ ಯೆಶಾ 52:15] “ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ. [PE][PS]
ರೋಮಾಪುರದವರಿಗೆ 15 : 22 (IRVKN)
ಈ ಕಾರಣದಿಂದ [§ ರೋಮಾ. 1:13] ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.
ರೋಮಾಪುರದವರಿಗೆ 15 : 23 (IRVKN)
ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ [* ರೋಮಾ. 15:29,32; 1:10-11; ಅ. ಕೃ. 19:21] ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
ರೋಮಾಪುರದವರಿಗೆ 15 : 24 (IRVKN)
ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
ರೋಮಾಪುರದವರಿಗೆ 15 : 25 (IRVKN)
[† ಅ. ಕೃ. 19:21, 20:22, 21:15, 24:17] ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
ರೋಮಾಪುರದವರಿಗೆ 15 : 26 (IRVKN)
ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ [‡ 1 ಕೊರಿ 16:1-4, 2 ಕೊರಿ 8:1, 1:9, 2:13] ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
ರೋಮಾಪುರದವರಿಗೆ 15 : 27 (IRVKN)
ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ [§ 1 ಕೊರಿ 9:11, ಗಲಾ. 6:6] ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
ರೋಮಾಪುರದವರಿಗೆ 15 : 28 (IRVKN)
ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
ರೋಮಾಪುರದವರಿಗೆ 15 : 29 (IRVKN)
ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
ರೋಮಾಪುರದವರಿಗೆ 15 : 30 (IRVKN)
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ [* ಫಿಲಿ. 1:8] ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ರೋಮಾಪುರದವರಿಗೆ 15 : 31 (IRVKN)
ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
ರೋಮಾಪುರದವರಿಗೆ 15 : 32 (IRVKN)
ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.
ರೋಮಾಪುರದವರಿಗೆ 15 : 33 (IRVKN)
[† ರೋಮಾ. 6:20] ಶಾಂತಿದಾಯಕವಾದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: