ರೋಮಾಪುರದವರಿಗೆ 2 : 1 (IRVKN)
ಯೆಹೂದ್ಯರಾದರೂ ಅಪರಾಧಿಗಳೇ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, * ರೋಮಾ. 1:20 ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, † ಮತ್ತಾ 7:2 ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
ರೋಮಾಪುರದವರಿಗೆ 2 : 2 (IRVKN)
ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
ರೋಮಾಪುರದವರಿಗೆ 2 : 3 (IRVKN)
ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
ರೋಮಾಪುರದವರಿಗೆ 2 : 4 (IRVKN)
ಅಥವಾ ಆತನ ಎಫೆ 1:17,18; 2:4,7 ಅಪಾರವಾದ ದಯೆ, § ರೋಮಾ. 3:26 ಸಹನೆ, * ರೋಮಾ. 9:22 ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ † 2 ಪೇತ್ರ 3:9,15 ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
ರೋಮಾಪುರದವರಿಗೆ 2 : 5 (IRVKN)
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ರೋಮಾಪುರದವರಿಗೆ 2 : 6 (IRVKN)
ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10 ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
ರೋಮಾಪುರದವರಿಗೆ 2 : 7 (IRVKN)
ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
ರೋಮಾಪುರದವರಿಗೆ 2 : 8 (IRVKN)
ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
ರೋಮಾಪುರದವರಿಗೆ 2 : 9 (IRVKN)
ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ § ಯೆಹೆ. 18:20 ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
ರೋಮಾಪುರದವರಿಗೆ 2 : 10 (IRVKN)
ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. * ರೋಮಾ. 1:16
ರೋಮಾಪುರದವರಿಗೆ 2 : 11 (IRVKN)
ಅ. ಕೃ. 10:34 ದೇವರಲ್ಲಿ ಪಕ್ಷಪಾತವಿಲ್ಲ.
ರೋಮಾಪುರದವರಿಗೆ 2 : 12 (IRVKN)
ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
ರೋಮಾಪುರದವರಿಗೆ 2 : 13 (IRVKN)
ಯಾಕೋಬ 1:22,23 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
ರೋಮಾಪುರದವರಿಗೆ 2 : 14 (IRVKN)
ಧರ್ಮಶಾಸ್ತ್ರವಿಲ್ಲದ ಅನ್ಯಜನರು § ರೋಮಾ. 1:19 ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
ರೋಮಾಪುರದವರಿಗೆ 2 : 15 (IRVKN)
ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
ರೋಮಾಪುರದವರಿಗೆ 2 : 16 (IRVKN)
* ರೋಮಾ. 16:25,26; 2 ತಿಮೊ. 2:8; ಗಲಾ. 1:11 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ † ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22 ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ರೋಮಾಪುರದವರಿಗೆ 2 : 17 (IRVKN)
ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
ರೋಮಾಪುರದವರಿಗೆ 2 : 18 (IRVKN)
ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.
ರೋಮಾಪುರದವರಿಗೆ 2 : 19 (IRVKN)
ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಮತ್ತಾ 15:14 ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
ರೋಮಾಪುರದವರಿಗೆ 2 : 20 (IRVKN)
ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
ರೋಮಾಪುರದವರಿಗೆ 2 : 21 (IRVKN)
§ ಮತ್ತಾ 23:3-28; 15:1-9 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
ರೋಮಾಪುರದವರಿಗೆ 2 : 22 (IRVKN)
ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
ರೋಮಾಪುರದವರಿಗೆ 2 : 23 (IRVKN)
ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
ರೋಮಾಪುರದವರಿಗೆ 2 : 24 (IRVKN)
* ಯೆಶಾ 52:5; ಯೆಹೆ. 36:20 “ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
ರೋಮಾಪುರದವರಿಗೆ 2 : 25 (IRVKN)
ಗಲಾ. 5:3 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
ರೋಮಾಪುರದವರಿಗೆ 2 : 26 (IRVKN)
ಹೀಗಿರಲಾಗಿ ಎಫೆ 2:11 ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?
ರೋಮಾಪುರದವರಿಗೆ 2 : 27 (IRVKN)
ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
ರೋಮಾಪುರದವರಿಗೆ 2 : 28 (IRVKN)
§ ರೋಮಾ. 6-8; ಗಲಾ. 6:15; ರೋಮಾ 2:17 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
ರೋಮಾಪುರದವರಿಗೆ 2 : 29 (IRVKN)
ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು * ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11 ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, † 2 ಕೊರಿ 10:18 ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29