ರೋಮಾಪುರದವರಿಗೆ 3 : 1 (IRVKN)
ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
ರೋಮಾಪುರದವರಿಗೆ 3 : 2 (IRVKN)
ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ * ಧರ್ಮೋ 4:8, ಕೀರ್ತ 147:19-20, ಅ. ಕೃ. 7:38 ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
ರೋಮಾಪುರದವರಿಗೆ 3 : 3 (IRVKN)
ರೋಮಾ. 10:16 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
ರೋಮಾಪುರದವರಿಗೆ 3 : 4 (IRVKN)
ಬದಲಾಗಿ, ಕೀರ್ತ 51:4 “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, § ಕೀರ್ತ 62:9 ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
ರೋಮಾಪುರದವರಿಗೆ 3 : 5 (IRVKN)
ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. * ರೋಮಾ. 6:19, 1 ಕೊರಿ 9:8, ಗಲಾ. 3:15 ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
ರೋಮಾಪುರದವರಿಗೆ 3 : 6 (IRVKN)
ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
ರೋಮಾಪುರದವರಿಗೆ 3 : 7 (IRVKN)
ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
ರೋಮಾಪುರದವರಿಗೆ 3 : 8 (IRVKN)
ರೋಮಾ. 6:1,15 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
ರೋಮಾಪುರದವರಿಗೆ 3 : 9 (IRVKN)
ಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮ ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ರೋಮಾ. 2:1-29 ಯೆಹೂದ್ಯರೇ ಆಗಲಿ § ರೋಮಾ. 1:18-32 ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
ರೋಮಾಪುರದವರಿಗೆ 3 : 10 (IRVKN)
ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, * ಕೀರ್ತ 14:1-3, 53:1-3 “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ರೋಮಾಪುರದವರಿಗೆ 3 : 11 (IRVKN)
ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
ರೋಮಾಪುರದವರಿಗೆ 3 : 12 (IRVKN)
ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
ರೋಮಾಪುರದವರಿಗೆ 3 : 13 (IRVKN)
ಕೀರ್ತ 5:9 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ‡ ಕೀರ್ತ 140:3 ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
ರೋಮಾಪುರದವರಿಗೆ 3 : 14 (IRVKN)
§ ಕೀರ್ತ 10:7 ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
ರೋಮಾಪುರದವರಿಗೆ 3 : 15 (IRVKN)
* ಜ್ಞಾ. 1:16, ಯೆಶಾ 59:7-8 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
ರೋಮಾಪುರದವರಿಗೆ 3 : 16 (IRVKN)
ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
ರೋಮಾಪುರದವರಿಗೆ 3 : 17 (IRVKN)
ಸಮಾಧಾನದ ಮಾರ್ಗವನ್ನೇ ಅರಿಯರು.
ರೋಮಾಪುರದವರಿಗೆ 3 : 18 (IRVKN)
ಕೀರ್ತ 36:1 ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
ರೋಮಾಪುರದವರಿಗೆ 3 : 19 (IRVKN)
ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ರೋಮಾಪುರದವರಿಗೆ 3 : 20 (IRVKN)
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. § ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ರೋಮಾಪುರದವರಿಗೆ 3 : 21 (IRVKN)
ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ ಈಗಲಾದರೋ * ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17 ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ † ಅ. ಕೃ. 10:43 ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
ರೋಮಾಪುರದವರಿಗೆ 3 : 22 (IRVKN)
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
ರೋಮಾಪುರದವರಿಗೆ 3 : 23 (IRVKN)
ರೋಮಾ. 3:9 ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ರೋಮಾಪುರದವರಿಗೆ 3 : 24 (IRVKN)
§ ತೀತ. 3:7 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು * ಎಫೆ 1:7, ಕೊಲೊ 1:14, ಇಬ್ರಿ. 9:15 ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
ರೋಮಾಪುರದವರಿಗೆ 3 : 25 (IRVKN)
ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
ರೋಮಾಪುರದವರಿಗೆ 3 : 26 (IRVKN)
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
ರೋಮಾಪುರದವರಿಗೆ 3 : 27 (IRVKN)
ರೋಮಾ. 2:17,23; 1 ಕೊರಿ 1:29-31, ಎಫೆ 2:9 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
ರೋಮಾಪುರದವರಿಗೆ 3 : 28 (IRVKN)
ಈ ವಚನದೊಂದಿಗೆ ಯಾಕೋಬ 2:18 ಹೋಲಿಸಿ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
ರೋಮಾಪುರದವರಿಗೆ 3 : 29 (IRVKN)
§ ರೋಮಾ. 9:24, 10:12, 15:9, ಗಲಾ. 3:28 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು * ಗಲಾ. 3:20 ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
ರೋಮಾಪುರದವರಿಗೆ 3 : 30 (IRVKN)
ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಗಲಾ. 3:8 ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
ರೋಮಾಪುರದವರಿಗೆ 3 : 31 (IRVKN)
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31