ರೋಮಾಪುರದವರಿಗೆ 4 : 1 (IRVKN)
ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ ಹಾಗಾದರೆ ವಂಶಾನುಕ್ರಮವಾಗಿ ನಮಗೆ * ಯೆಶಾ 51:2; ರೋಮಾ. 4:16 ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
ರೋಮಾಪುರದವರಿಗೆ 4 : 2 (IRVKN)
ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ 1 ಕೊರಿ 1:31 ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
ರೋಮಾಪುರದವರಿಗೆ 4 : 3 (IRVKN)
ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, ಆದಿ 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23 “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
ರೋಮಾಪುರದವರಿಗೆ 4 : 4 (IRVKN)
ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
ರೋಮಾಪುರದವರಿಗೆ 4 : 5 (IRVKN)
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22 ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
ರೋಮಾಪುರದವರಿಗೆ 4 : 6 (IRVKN)
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
ರೋಮಾಪುರದವರಿಗೆ 4 : 7 (IRVKN)
* ಕೀರ್ತ 32:1 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
ರೋಮಾಪುರದವರಿಗೆ 4 : 8 (IRVKN)
2 ಕೊರಿ 5:19 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
ರೋಮಾಪುರದವರಿಗೆ 4 : 9 (IRVKN)
ರೋಮಾ. 3:30 ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? § ರೋಮಾ. 4:3 “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
ರೋಮಾಪುರದವರಿಗೆ 4 : 10 (IRVKN)
ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
ರೋಮಾಪುರದವರಿಗೆ 4 : 11 (IRVKN)
ಅನಂತರ * ಆದಿ 17:10,16 ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ † ರೋಮಾ. 4:12,16 ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
ರೋಮಾಪುರದವರಿಗೆ 4 : 12 (IRVKN)
ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
ರೋಮಾಪುರದವರಿಗೆ 4 : 13 (IRVKN)
ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು ಆದಿ 17:4-6; 22:17,18 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
ರೋಮಾಪುರದವರಿಗೆ 4 : 14 (IRVKN)
ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
ರೋಮಾಪುರದವರಿಗೆ 4 : 15 (IRVKN)
ಯಾಕೆಂದರೆ § ರೋಮಾ. 7:7; 10:25; 2 ಕೊರಿ 7:9; ಗಲಾ. 3:10 ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ * ರೋಮಾ. 3:20; ಗಲಾ. 3:19 ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
ರೋಮಾಪುರದವರಿಗೆ 4 : 16 (IRVKN)
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ ಗಲಾ. 3:22 ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
ರೋಮಾಪುರದವರಿಗೆ 4 : 17 (IRVKN)
ಆದಿ 17:5 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು § 1 ಕೊರಿ 1:28 ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
ರೋಮಾಪುರದವರಿಗೆ 4 : 18 (IRVKN)
* ಆದಿ 15:5 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
ರೋಮಾಪುರದವರಿಗೆ 4 : 19 (IRVKN)
ಆದಿ 17:17 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ‡ ಇಬ್ರಿ. 11:12 ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ § ಆದಿ 18:11 ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
ರೋಮಾಪುರದವರಿಗೆ 4 : 20 (IRVKN)
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
ರೋಮಾಪುರದವರಿಗೆ 4 : 21 (IRVKN)
ದೇವರನ್ನು ಘನಪಡಿಸುವವನಾಗಿ * ಆದಿ 18:14 ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು † ನಂಬಿಕೆಯಿಂದಲೇ ಬಲಹೊಂದಿ ಪೂರ್ಣದೃಢತೆಯುಳ್ಳವನಾದನು.
ರೋಮಾಪುರದವರಿಗೆ 4 : 22 (IRVKN)
ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
ರೋಮಾಪುರದವರಿಗೆ 4 : 23 (IRVKN)
ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ರೋಮಾ. 15:4; 1 ಕೊರಿ 9:9,10; 6:11; 2 ತಿಮೊ. 3:16,17 ನಮಗೋಸ್ಕರವೂ ಬರೆದಿರುವುದು.
ರೋಮಾಪುರದವರಿಗೆ 4 : 24 (IRVKN)
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ § ಅ. ಕೃ. 2:24 ಎಬ್ಬಿಸಿದ ದೇವರನ್ನು * ರೋಮಾ. 10:9; 1 ಪೇತ್ರ 1:21 ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
ರೋಮಾಪುರದವರಿಗೆ 4 : 25 (IRVKN)
ರೋಮಾ. 5:6,8; 8:32; ಯೆಶಾ 53:5,6; ಮತ್ತಾ 20:28; ಗಲಾ. 1:4 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ‡ ರೋಮಾ. 5:18 ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25