ರೋಮಾಪುರದವರಿಗೆ 7 : 1 (IRVKN)
ಕ್ರಿಸ್ತನಲ್ಲಿ ಐಕ್ಯವಾದವರು ಧರ್ಮಶಾಸ್ತ್ರದ ಅಧೀನರಲ್ಲ ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
ರೋಮಾಪುರದವರಿಗೆ 7 : 2 (IRVKN)
ಇದಕ್ಕೆ ದೃಷ್ಟಾಂತ, * 1 ಕೊರಿ 7:39 ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.
ರೋಮಾಪುರದವರಿಗೆ 7 : 3 (IRVKN)
ಹೀಗಿರಲಾಗಿ ಗಂಡನು ಜೀವದಿಂದಿರುವಾಗ † ಮತ್ತಾ 5:32 ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.
ರೋಮಾಪುರದವರಿಗೆ 7 : 4 (IRVKN)
ಹಾಗೆಯೇ ನನ್ನ ಸಹೋದರರೇ, ನೀವು ಸಹ ‡ ಎಫೆ 2:16, ಕೊಲೊ 1:22 ಕ್ರಿಸ್ತನ ದೇಹದ ಮೂಲಕವಾಗಿ § ರೋಮಾ. 8:2, ಗಲಾ. 2:19, ಎಫೆ 2:15, ಕೊಲೊ 2:14 ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. * ರೋಮಾ. 6:22, ಗಲಾ. 5:22, ಎಫೆ 5:9 ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
ರೋಮಾಪುರದವರಿಗೆ 7 : 5 (IRVKN)
ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ † ರೋಮಾ. 6:21-23 ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
ರೋಮಾಪುರದವರಿಗೆ 7 : 6 (IRVKN)
ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ‡ ರೋಮಾ. 6:4 ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
ರೋಮಾಪುರದವರಿಗೆ 7 : 7 (IRVKN)
ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು. ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. § ರೋಮಾ. 3:20 ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ * ರೋಮಾ. 13:9, ವಿಮೋ 20:17, ಧರ್ಮೋ 5:21 “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ರೋಮಾಪುರದವರಿಗೆ 7 : 8 (IRVKN)
ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. † 1 ಕೊರಿ 15:56 ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
ರೋಮಾಪುರದವರಿಗೆ 7 : 9 (IRVKN)
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
ರೋಮಾಪುರದವರಿಗೆ 7 : 10 (IRVKN)
ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
ರೋಮಾಪುರದವರಿಗೆ 7 : 11 (IRVKN)
ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
ರೋಮಾಪುರದವರಿಗೆ 7 : 12 (IRVKN)
ಹೀಗಿರಲಾಗಿ ‡ ಕೀರ್ತ 19:8-9, 119:137, 2 ಪೇತ್ರ. 2:21 ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
ರೋಮಾಪುರದವರಿಗೆ 7 : 13 (IRVKN)
ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
ರೋಮಾಪುರದವರಿಗೆ 7 : 14 (IRVKN)
ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ § 1 ಅರಸು. 21:20,25; 2 ಅರಸು. 17:17, ಯೆಶಾ 50:1, 52:3 ಮಾರಲ್ಪಟ್ಟವನೂ ಆಗಿದ್ದೇನೆ.
ರೋಮಾಪುರದವರಿಗೆ 7 : 15 (IRVKN)
ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, * ರೋಮಾ. 7:18-19 ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
ರೋಮಾಪುರದವರಿಗೆ 7 : 16 (IRVKN)
ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ † 1 ತಿಮೊ. 1:8, ರೋಮಾ. 7:12 ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.
ರೋಮಾಪುರದವರಿಗೆ 7 : 17 (IRVKN)
ಹೀಗಿರಲಾಗಿ ‡ ರೋಮಾ. 7:20 ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ರೋಮಾಪುರದವರಿಗೆ 7 : 18 (IRVKN)
§ ಆದಿ 6:5, 8:21, ಕೀರ್ತ 51:5, ಯೆರೆ 17:9 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
ರೋಮಾಪುರದವರಿಗೆ 7 : 19 (IRVKN)
* ರೋಮಾ. 7:15, ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
ರೋಮಾಪುರದವರಿಗೆ 7 : 20 (IRVKN)
ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ † ರೋಮಾ. 7:17 ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
ರೋಮಾಪುರದವರಿಗೆ 7 : 21 (IRVKN)
ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
ರೋಮಾಪುರದವರಿಗೆ 7 : 22 (IRVKN)
ಅಂತರಾತ್ಮದೊಳಗೆ ‡ ಕೀರ್ತ 1:2, 112:1, 119:35 ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. § ಗಲಾ. 5:17 ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.
ರೋಮಾಪುರದವರಿಗೆ 7 : 23 (IRVKN)
ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.
ರೋಮಾಪುರದವರಿಗೆ 7 : 24 (IRVKN)
ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! * ರೋಮಾ. 8:23 ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?
ರೋಮಾಪುರದವರಿಗೆ 7 : 25 (IRVKN)
† 1 ಕೊರಿ 15:57 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
❮
❯