ರೋಮಾಪುರದವರಿಗೆ 8 : 1 (IRVKN)
ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನ ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
ರೋಮಾಪುರದವರಿಗೆ 8 : 2 (IRVKN)
* 1 ಕೊರಿ 15:45; 2 ಕೊರಿ 3:6 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು † ನನ್ನನ್ನು ಎಂದು ಬರೆದಿದೆ ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ‡ ರೋಮಾ. 8:12; 6:14,18; 7:4 ವಿಮುಕ್ತಿಗೊಳಿಸಿತು.
ರೋಮಾಪುರದವರಿಗೆ 8 : 3 (IRVKN)
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ § ಗಲಾ. 9; ಇಬ್ರಿ. 7:18 ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು * ಯಾಜ 16:5; ಇಬ್ರಿ. 10:6,8; 13:11 ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ † ಫಿಲಿ. 2:7; ಯೋಹಾ 1:14 ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ರೋಮಾಪುರದವರಿಗೆ 8 : 4 (IRVKN)
ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ‡ ಗಲಾ. 5:16,25 ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.
ರೋಮಾಪುರದವರಿಗೆ 8 : 5 (IRVKN)
§ ಗಲಾ. 6:8 ಶರೀರಭಾವವನ್ನು ಅನುಸರಿಸುವವರು * ಗಲಾ. 5:19-21 ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು † ಗಲಾ. 5:22,23,25 ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ರೋಮಾಪುರದವರಿಗೆ 8 : 6 (IRVKN)
‡ ರೋಮಾ. 6:21; 8:13 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
ರೋಮಾಪುರದವರಿಗೆ 8 : 7 (IRVKN)
ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು § ಯಾಕೋಬ 4:4 ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, * 1 ಕೊರಿ 2:14 ಒಳಪಡುವುದಕ್ಕಾಗುವುದೂ ಇಲ್ಲ.
ರೋಮಾಪುರದವರಿಗೆ 8 : 8 (IRVKN)
ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
ರೋಮಾಪುರದವರಿಗೆ 8 : 9 (IRVKN)
ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. † ರೋಮಾ. 8:11; ಕೊರಿ 3:16; 6:19; 2 ಕೊರಿ 6:16; ತಿಮೊ. 1:14 ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ‡ ಯೂದ 19 ಯಾರಲ್ಲಿ § ಅ. ಕೃ. 16:7 ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
ರೋಮಾಪುರದವರಿಗೆ 8 : 10 (IRVKN)
ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
ರೋಮಾಪುರದವರಿಗೆ 8 : 11 (IRVKN)
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ * ಅ. ಕೃ. 2:24 ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
ರೋಮಾಪುರದವರಿಗೆ 8 : 12 (IRVKN)
ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು † ರೋಮಾ. 8:2 ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
ರೋಮಾಪುರದವರಿಗೆ 8 : 13 (IRVKN)
ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ‡ ಕೊಲೊ 3:5 ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
ರೋಮಾಪುರದವರಿಗೆ 8 : 14 (IRVKN)
ಯಾರು § ಗಲಾ. 5:18 ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು * ರೋಮಾ. 8:16,19; 9:8,26; ಯೋಹಾ 1:12; 1 ಯೋಹಾ 3:1 ದೇವರ ಮಕ್ಕಳಾಗಿದ್ದಾರೆ.
ರೋಮಾಪುರದವರಿಗೆ 8 : 15 (IRVKN)
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ † 2 ತಿಮೊ. 1:7; 1 ಯೋಹಾ 4:18 ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ‡ ರೋಮಾ. 8:23; ಗಲಾ. 4:5 ದೇವರನ್ನು, § ಗಲಾ. 4:6; ಮಾರ್ಕ 14:36 “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ರೋಮಾಪುರದವರಿಗೆ 8 : 16 (IRVKN)
ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ * 2 ಕೊರಿ 1:22; 5:5; ಎಫೆ 1:13,14; 1 ಯೋಹಾ 3:24 ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ರೋಮಾಪುರದವರಿಗೆ 8 : 17 (IRVKN)
ಮಕ್ಕಳಾಗಿದ್ದರೆ † ಗಲಾ. 3:29; 4:7; ತೀತ 3:7 ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ‡ 2 ಕೊರಿ 1:7; 2 ತಿಮೊ. 2:12; ಅ. ಕೃ. 14:22 ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ರೋಮಾಪುರದವರಿಗೆ 8 : 18 (IRVKN)
ದೇವರ ಮಕ್ಕಳಿಗೆ ಮುಂದೆ ಬರುವ ಮಹಿಮೆ ನಮಗೋಸ್ಕರ ಮುಂದಿನ ಕಾಲದಲ್ಲಿ § 1 ಪೇತ್ರ. 4:13; 5:1; 1 ಯೋಹಾ 3:2 ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ * 2 ಕೊರಿ 4:17 ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.
ರೋಮಾಪುರದವರಿಗೆ 8 : 19 (IRVKN)
† 1 ಪೇತ್ರ. 4:13; 5:1; 1 ಯೋಹಾ 3:2 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
ರೋಮಾಪುರದವರಿಗೆ 8 : 20 (IRVKN)
‡ ಆದಿ 3:18,19; ಪ್ರಸಂಗಿ 1:2 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು § ಆದಿ 3:17 ಒಳಪಡಿಸಿದವನ ಸಂಕಲ್ಪದಿಂದಲೇ,
ರೋಮಾಪುರದವರಿಗೆ 8 : 21 (IRVKN)
ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ * ಅ. ಕೃ. 3:21 ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
ರೋಮಾಪುರದವರಿಗೆ 8 : 22 (IRVKN)
ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ
ರೋಮಾಪುರದವರಿಗೆ 8 : 23 (IRVKN)
† 2 ಕೊರಿ 5:5 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ‡ ರೋಮಾ. 8:19,25 ದೇವರ ಮಕ್ಕಳ ಪದವಿಯನ್ನು ಅಂದರೆ § ರೋಮಾ. 7:24; ಫಿಲಿ. 3:20,21 ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.
ರೋಮಾಪುರದವರಿಗೆ 8 : 24 (IRVKN)
ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?
ರೋಮಾಪುರದವರಿಗೆ 8 : 25 (IRVKN)
ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ * 1 ಥೆಸ. 1:3; 5:8 ತಾಳ್ಮೆಯಿಂದ ಕಾದುಕೊಂಡಿದ್ದೇವೆ.
ರೋಮಾಪುರದವರಿಗೆ 8 : 26 (IRVKN)
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ † ಯಾಕೋಬ 4:3 ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ‡ ಜೆಕ. 12:10; ಎಫೆ 6:18 ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
ರೋಮಾಪುರದವರಿಗೆ 8 : 27 (IRVKN)
ಆದರೆ § 1 ಸಮು 16:7; 1ಪೂರ್ವ 28:9; ಜ್ಞಾ. 15:11; 17:3; ಯೆರೆ 11:20, 17:10; ಲೂಕ 16:15; 1 ಥೆಸ. 2:4; ಪ್ರಕ 2:23 ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; * ರೋಮಾ. 8:34 ಆ ಆತ್ಮನು † 1 ಯೋಹಾ 5:14 ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.
ರೋಮಾಪುರದವರಿಗೆ 8 : 28 (IRVKN)
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ‡ ರೋಮಾ. 9:24; 1 ಕೊರಿ 1:9; ಗಲಾ. 1:15; ಎಫೆ 4:1-4; 2 ತಿಮೊ. 1:9; ಇಬ್ರಿ. 9:15 ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ § ಎಜ್ರ 8:22 ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ರೋಮಾಪುರದವರಿಗೆ 8 : 29 (IRVKN)
ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
ರೋಮಾಪುರದವರಿಗೆ 8 : 30 (IRVKN)
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ * 1 ಕೊರಿ 6:11 ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ರೋಮಾಪುರದವರಿಗೆ 8 : 31 (IRVKN)
ಯೇಸು ಕ್ರಿಸ್ತನಲ್ಲಿ ದೇವರ ಪ್ರೀತಿ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? † 2 ಅರಸು. 16; ಕೀರ್ತ 118:6; 1 ಯೋಹಾ 4:4 ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ರೋಮಾಪುರದವರಿಗೆ 8 : 32 (IRVKN)
‡ ಯೋಹಾ 3:16 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು § ರೋಮಾ. 4:25 ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
ರೋಮಾಪುರದವರಿಗೆ 8 : 33 (IRVKN)
ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? * ಯೆಶಾ 50:8,9 ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
ರೋಮಾಪುರದವರಿಗೆ 8 : 34 (IRVKN)
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು † ಇಬ್ರಿ. 7:5; 1 ಯೋಹಾ 2:1 ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
ರೋಮಾಪುರದವರಿಗೆ 8 : 35 (IRVKN)
ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
ರೋಮಾಪುರದವರಿಗೆ 8 : 36 (IRVKN)
‡ ಕೀರ್ತ 44:22 “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.
ರೋಮಾಪುರದವರಿಗೆ 8 : 37 (IRVKN)
ಆದರೆ § ಗಲಾ. 2:20; ಎಫೆ 5:2; ಪ್ರಕ 1:5; 3:9 ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ * 1 ಕೊರಿ 15:57; ಯೋಹಾ 16:33 ಪೂರ್ಣ ಜಯಶಾಲಿಗಳಾಗಿದ್ದೇವೆ.
ರೋಮಾಪುರದವರಿಗೆ 8 : 38 (IRVKN)
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
ರೋಮಾಪುರದವರಿಗೆ 8 : 39 (IRVKN)
ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.
❮
❯