ರೋಮಾಪುರದವರಿಗೆ 9 : 1 (IRVKN)
ಇಸ್ರಾಯೇಲ್ಯರ ಅಪನಂಬಿಕೆಯು ಅತ್ಯಂತ ದುಃಖಕರವಾದದ್ದು * 2 ಕೊರಿ 11:10; 1 ತಿಮೊ. 2:7; ಗಲಾ. 1:20 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
ರೋಮಾಪುರದವರಿಗೆ 9 : 2 (IRVKN)
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
ರೋಮಾಪುರದವರಿಗೆ 9 : 3 (IRVKN)
ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
ರೋಮಾಪುರದವರಿಗೆ 9 : 4 (IRVKN)
ಅವರು ಇಸ್ರಾಯೇಲಿನ ವಂಶದವರು. ವಿಮೋ 4:22, ರೋಮಾ. 8:15 ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ‡ ಆದಿ 17:2, ಧರ್ಮೋ 29:14, ಗಲಾ. 4:24 ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ § ಧರ್ಮೋ 4:14 ಅವರಿಗೆ ಧರ್ಮಶಾಸ್ತ್ರವು, * ಇಬ್ರಿ. 9:1 ದೇವಾಲಯದಲ್ಲಿ ನಡೆಯುವ ಆರಾಧನೆಯೂ, ಎಫೆ 2:12, ಅ. ಕೃ. 13:32 ವಾಗ್ದಾನಗಳೂ ಕೊಡಲ್ಪಟ್ಟವು.
ರೋಮಾಪುರದವರಿಗೆ 9 : 5 (IRVKN)
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8 ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
ರೋಮಾಪುರದವರಿಗೆ 9 : 6 (IRVKN)
ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ವಾಗ್ದಾನಗಳಿಗೆ ವಿರುದ್ಧವಾದದ್ದಲ್ಲ § ಗಲಾ. 4:23 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
ರೋಮಾಪುರದವರಿಗೆ 9 : 7 (IRVKN)
ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ * ಆದಿ 21:12, ಇಬ್ರಿ 11:18 “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
ರೋಮಾಪುರದವರಿಗೆ 9 : 8 (IRVKN)
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ಗಲಾ. 4:23, 28 ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
ರೋಮಾಪುರದವರಿಗೆ 9 : 9 (IRVKN)
ಆದಿ 18:10; 14:17,21 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
ರೋಮಾಪುರದವರಿಗೆ 9 : 10 (IRVKN)
ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
ರೋಮಾಪುರದವರಿಗೆ 9 : 11 (IRVKN)
(11-12)ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ § ಆದಿ 25:23 “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ * ರೋಮಾ. 4:17, 8:28 ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
ರೋಮಾಪುರದವರಿಗೆ 9 : 12 (IRVKN)
ರೋಮಾಪುರದವರಿಗೆ 9 : 13 (IRVKN)
ಇದಕ್ಕನುಸಾರವಾಗಿ ಮಲಾ. 1:2-3 “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ‡ ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25 ದ್ವೇಷಿಸಿದನು” ಎಂದು ಬರೆದದೆ.
ರೋಮಾಪುರದವರಿಗೆ 9 : 14 (IRVKN)
ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ನ್ಯಾಯಕ್ಕೆ ವಿರುದ್ಧವಾದದ್ದಲ್ಲ ಹಾಗಾದರೆ ಏನು ಹೇಳೋಣ? § ಧರ್ಮೋ 32:4, 2 ಪೂರ್ವ 19:7, ಯೋಬ. 8:3, 34:10, ಕೀರ್ತ 92:15 ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
ರೋಮಾಪುರದವರಿಗೆ 9 : 15 (IRVKN)
* ವಿಮೋ 33:19 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
ರೋಮಾಪುರದವರಿಗೆ 9 : 16 (IRVKN)
ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
ರೋಮಾಪುರದವರಿಗೆ 9 : 17 (IRVKN)
ದೇವರು ಫರೋಹನನನ್ನು ಕುರಿತು ವಿಮೋ 9:16 “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ 9 : 18 (IRVKN)
ದೇವರು ವಿಮೋ 4:21, 9:12, 11:10, 14:4, ಧರ್ಮೋ 2:30 ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
ರೋಮಾಪುರದವರಿಗೆ 9 : 19 (IRVKN)
§ 2 ಪೂರ್ವ 20:6, ಯೋಬ. 9:12, ದಾನಿ. 4:35 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
ರೋಮಾಪುರದವರಿಗೆ 9 : 20 (IRVKN)
ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? * ಯೆಶಾ 29:16, 45:9 ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
ರೋಮಾಪುರದವರಿಗೆ 9 : 21 (IRVKN)
2 ತಿಮೊ. 2:20 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ‡ ಯೆಶಾ 64:8, ಯೆರ. 18:6 ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
ರೋಮಾಪುರದವರಿಗೆ 9 : 22 (IRVKN)
ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
ರೋಮಾಪುರದವರಿಗೆ 9 : 23 (IRVKN)
ಮತ್ತು § ರೋಮಾ. 8:29-30 ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ * ಎಫೆ 3:17 ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ರೋಮಾಪುರದವರಿಗೆ 9 : 24 (IRVKN)
ಆತನು ಕರುಣಿಸಿದ ನಮ್ಮನ್ನು ರೋಮಾ. 3:29 ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ‡ ರೋಮಾ. 8:25 ಕರೆದನು.
ರೋಮಾಪುರದವರಿಗೆ 9 : 25 (IRVKN)
ಆ ವಚನವೇನಂದರೆ, § ಹೋಶೇ. 2:23, 1:10 “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
ರೋಮಾಪುರದವರಿಗೆ 9 : 26 (IRVKN)
ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ * ರೋಮಾ. 8:14, ಮತ್ತಾ 16:16 ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ.
ರೋಮಾಪುರದವರಿಗೆ 9 : 27 (IRVKN)
ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: ಯೆಶಾ 10:22,23 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ‡ ರೋಮಾ. 11:5 ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ರೋಮಾಪುರದವರಿಗೆ 9 : 28 (IRVKN)
ಅದೇ ಅಭಿಪ್ರಾಯದಿಂದ ಯೆಶಾಯನು § ಯೆಶಾ 1:9 ಮತ್ತೊಂದು ವಚನದಲ್ಲಿ,
ರೋಮಾಪುರದವರಿಗೆ 9 : 29 (IRVKN)
* ಯಾಕೋಬ. 5:4 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ [† ಆದಿ 19:24-25; ಧರ್ಮೋ 29: 23 ]“ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
ರೋಮಾಪುರದವರಿಗೆ 9 : 30 (IRVKN)
ಇಸ್ರಾಯೇಲ್ಯರನ್ನು ದೇವರು ತಳ್ಳಿಬಿಟ್ಟದ್ದಕ್ಕೆ ಇಸ್ರಾಯೇಲ್ಯರೇ ಕಾರಣ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ರೋಮಾ. 10:20 ಅನ್ಯಜನರಿಗೆ ನೀತಿಯು ಅಂದರೆ § ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ರೋಮಾಪುರದವರಿಗೆ 9 : 31 (IRVKN)
ಆದರೆ ನೀತಿಯನ್ನು ಹಿಂಬಾಲಿಸಿದ್ದ * ರೋಮಾ. 10:2-3, 11:7, ಗಲಾ. 5:4 ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
ರೋಮಾಪುರದವರಿಗೆ 9 : 32 (IRVKN)
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
ರೋಮಾಪುರದವರಿಗೆ 9 : 33 (IRVKN)
1 ಪೇತ್ರ. 2:8 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, ಯೆಶಾ 28:16, 8:14, 1 ಪೇತ್ರ. 2:6-7 “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. § ಆತನ ಮೇಲೆ ಆತನಲ್ಲಿ ನಂಬಿಕೆಯಿಡುವವನು * ಯೆಶಾ 49:23, ಯೋವೇ. 2:26-27 ಆಶಾಭಂಗಪಡುವುದಿಲ್ಲ” ಎಂಬುದೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33