ರೂತಳು 2 : 1 (IRVKN)
{ರೂತಳು ಬೋವಜನ ಹೊಲದಲ್ಲಿ ಹಕ್ಕಲಾಯ್ದದ್ದು} [PS] ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.
ರೂತಳು 2 : 2 (IRVKN)
ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.
ರೂತಳು 2 : 3 (IRVKN)
ಆಕೆಯು ದೈವಯೋಗದಿಂದ ಎಲೀಮೆಲೆಕನ ಗೋತ್ರದವನಾದ ಬೋವಜನ ಸ್ವತ್ತಾಗಿದ್ದ ಹೊಲಕ್ಕೆ ಹೋಗಿ ತೆನೆ ಕೊಯ್ಯುವವರ ಹಿಂದಿನಿಂದ ಹಕ್ಕಲಾಯುತ್ತಾ ಇದ್ದಳು.
ರೂತಳು 2 : 4 (IRVKN)
ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು. [PE][PS]
ರೂತಳು 2 : 5 (IRVKN)
ತೆನೆ ಕೊಯ್ಯುವವರ ಜೊತೆಯಲ್ಲಿ ರೂತಳನ್ನು ನೋಡಿ ಬೋವಜನು ತೆನೆ ಕೊಯ್ಯುವವರನ್ನು ನಿರ್ವಹಿಸಲು ನೇಮಿಸಿದ್ದ ತನ್ನ ಸೇವಕನನ್ನು, “ಈ ಹೆಂಗಸು ಯಾರು?” ಎಂದು ಕೇಳಿದ್ದಕ್ಕೆ
ರೂತಳು 2 : 6 (IRVKN)
ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
ರೂತಳು 2 : 7 (IRVKN)
ಇವಳು ತೆನೆ “ಕೊಯ್ಯುವವರೊಂದಿಗೆ ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳುವ ಹಾಗೆ ಅಪ್ಪಣೆ ನೀಡಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲಿಯೇ ಇದ್ದಾಳೆ. ಸದ್ಯಕ್ಕೆ ಮನೆಯಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ” ಅಂದನು.
ರೂತಳು 2 : 8 (IRVKN)
ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.
ರೂತಳು 2 : 9 (IRVKN)
ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.
ರೂತಳು 2 : 10 (IRVKN)
ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
ರೂತಳು 2 : 11 (IRVKN)
ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.
ರೂತಳು 2 : 12 (IRVKN)
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
ರೂತಳು 2 : 13 (IRVKN)
ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
ರೂತಳು 2 : 14 (IRVKN)
ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
ರೂತಳು 2 : 15 (IRVKN)
ತರುವಾಯ ತಿರುಗಿ ಹಕ್ಕಲಾಯುವುದಕ್ಕೆ ಏಳಲು ಬೋವಜನು ತನ್ನ ಸೇವಕರಿಗೆ, “ಈಕೆಯು ಸಿವುಡುಗಳ ಮಧ್ಯದಲ್ಲಿ ಹಕ್ಕಲಾಯ್ದುಕೊಳ್ಳಲಿ, ಅಡ್ಡಿ ಮಾಡಬೇಡಿರಿ;
ರೂತಳು 2 : 16 (IRVKN)
ಸಿವುಡುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ” ಎಂದು ಆಜ್ಞಾಪಿಸಿದನು.
ರೂತಳು 2 : 17 (IRVKN)
ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು [* ಮೂವತ್ತು ಸೇರು ಅಂದರೆ ಒಂದು ಏಫಾ ಅಥವಾ ಸುಮಾರು 12 ಕಿಲೋಗ್ರಾಂ.] ಮೂವತ್ತು ಸೇರು ಜವೆಗೋದಿ ಸಿಕ್ಕಿತು.
ರೂತಳು 2 : 18 (IRVKN)
ಆಕೆಯು ಅದನ್ನು ಹೊತ್ತುಕೊಂಡು ಊರಿಗೆ ಬಂದು, ಆಕೆ ಹಕ್ಕಲಾಯ್ದದು ಸಂಗ್ರಹಿಸಿದ್ದನ್ನು ತನ್ನ ಅತ್ತೆಗೆ ತೋರಿಸಿದಳು. ತಾನು ಉಳಿಸಿಟ್ಟಿದ್ದ ಸುಟ್ಟ ತೆನೆಯನ್ನು ರೂತಳು ತನ್ನ ಅತ್ತೆಗೆ ಕೊಟ್ಟಳು.
ರೂತಳು 2 : 19 (IRVKN)
ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.
ರೂತಳು 2 : 20 (IRVKN)
ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.
ರೂತಳು 2 : 21 (IRVKN)
ಆಗ ಮೋವಾಬ್ಯಳಾದ ರೂತಳು “ಇದಲ್ಲದೆ ಆ ಮನುಷ್ಯನು ನನಗೆ, ‘ಸುಗ್ಗಿ ಮುಗಿಯುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರು ಎಂದು ಹೇಳಿದ್ದಾನೆ’ ” ಎಂದಳು.
ರೂತಳು 2 : 22 (IRVKN)
ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
ರೂತಳು 2 : 23 (IRVKN)
ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: