ರೂತಳು 4 : 1 (IRVKN)
ರೂತಳು ಬೋವಜನನ್ನು ಮದುವೆಯಾದದ್ದು ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.
ರೂತಳು 4 : 2 (IRVKN)
ಇದಲ್ಲದೆ ಅವನು ಊರಿನ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದಾಗ ಅವರೂ ಬಂದು ಕುಳಿತುಕೊಂಡರು.
ರೂತಳು 4 : 3 (IRVKN)
ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
ರೂತಳು 4 : 4 (IRVKN)
ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.
ರೂತಳು 4 : 5 (IRVKN)
ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
ರೂತಳು 4 : 6 (IRVKN)
ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.
ರೂತಳು 4 : 7 (IRVKN)
ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
ರೂತಳು 4 : 8 (IRVKN)
ಹಾಗೆಯೇ ಆ ಸಮೀಪಬಂಧುವು ಬೋವಜನಿಗೆ “ನೀನೇ ತೆಗೆದುಕೋ” ಎಂದು ಹೇಳಿ ತನ್ನ ಪಾದರಕ್ಷೆಯನ್ನು ತೆಗೆದುಕೊಟ್ಟನು.
ರೂತಳು 4 : 9 (IRVKN)
ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;
ರೂತಳು 4 : 10 (IRVKN)
ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.
ರೂತಳು 4 : 11 (IRVKN)
ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; * ಯೆಹೋವನು ರಾಹೇಲ್, ಲೇಯಾ ಎಂಬ ಸ್ತ್ರೀಯರಿಗೆ ಯಾಕೋಬನ ಮೂಲಕ ಅನೇಕ ಮಕ್ಕಳು ಹುಟ್ಟುವಂತೆ ಮಾಡಿದನು. ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.
ರೂತಳು 4 : 12 (IRVKN)
ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ † ಎಫ್ರಾತ್ ಗೋತ್ರದ ಪೂರ್ವಿಕನು. ಪೆರೆಚನ ಮನೆಗೆ ಸಮಾನವಾಗಲಿ” ಅಂದರು.
ರೂತಳು 4 : 13 (IRVKN)
ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
ರೂತಳು 4 : 14 (IRVKN)
ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.
ರೂತಳು 4 : 15 (IRVKN)
ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.
ರೂತಳು 4 : 16 (IRVKN)
ನವೊಮಿಯೇ ಆ ಮಗುವನ್ನು ಮಡಿಲಲ್ಲಿಟ್ಟುಕೊಂಡು ಸಾಕುತ್ತಿದ್ದಳು.
ರೂತಳು 4 : 17 (IRVKN)
ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.
ರೂತಳು 4 : 18 (IRVKN)
ದಾವೀದನ ವಂಶಾವಳಿ ಪೆರೆಚನ ವಂಶಾವಳಿ: ಪೆರೆಚನು ಹೆಚ್ರೋನನನ್ನು ಪಡೆದನು;
ರೂತಳು 4 : 19 (IRVKN)
ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
ರೂತಳು 4 : 20 (IRVKN)
ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು;
ರೂತಳು 4 : 21 (IRVKN)
ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;
ರೂತಳು 4 : 22 (IRVKN)
ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22